

ದೊಡ್ಡಬಳ್ಳಾಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಕರ್ನಾಟಕದಲ್ಲಿ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚುತ್ತವೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಈ ಕುರಿತು ಮಾತನಾಡಿದ ವಿಜಯೇಂದ್ರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಮಾತ್ರಕ್ಕೆ ಲೋಕಸಭೆ ಚುನಾವಣೆಯನ್ನು ಗೆದ್ದಿದ್ದೇವೆ ಎಂಬಂತೆ ಕಾಂಗ್ರೆಸ್ ನಾಯಕರು ವರ್ತಿಸುತ್ತಿದ್ದಾರೆ ಇದು ತುಂಬಾ ದಿನ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ಧಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಮುಖಂಡರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲಾ ದೇಶ ವಿರೋಧಿ ಚಟುವಟಿಕೆಗಳು ಹೆಚ್ಚಳವಾಗುತ್ತಿದೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ್ರ ಮಾತ್ರಕ್ಕೆ ಕಾಂಗ್ರೆಸ್ ನಾಯಕರು ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶವನ್ನೇ ಗೆದ್ದಿದ್ದೇವೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಆ ನಂತರ ಕಾಂಗ್ರೆಸ್ ನಾಯಕರು ಭ್ರಮೆಯಿಂದ ಹೊರಬರಲಿದ್ಧಾರೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.