More

  ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್​ನವರು ಕಡಿದು ಕಟ್ಟೆ ಹಾಕಿದ್ದು ಏನಿಲ್ಲ: ವಿಜಯೇಂದ್ರ

  ಚಿಕ್ಕಬಳ್ಳಾಪುರ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಾಕಷ್ಟು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಕಳೆದ 09 ತಿಂಗಳ ಅವಧಿಯಲ್ಲಿ ಕಡಿದು ಕಟ್ಟೆ ಹಾಕಿದ್ದು, ಏನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

  ಚಿಕ್ಕಬಳ್ಳಾಪುರ ಜಿಲ್ಲೆಯ ದಿಬ್ಬೂರಿನ ಗ್ರಾಮ ಪರಿಶ್ರಮ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ವಿಜಯೇಂದ್ರ, ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

  ಇದನ್ನೂ ಓದಿ: ವಾಜಪೇಯಿ ಅನುಯಾಯಿಗೆ ಒಲಿಯಿತು ರಾಜ್ಯಸಭಾ ಟಿಕೆಟ್​; ಇಲ್ಲಿದೆ ನೋಡಿ ವ್ಯಕ್ತಿಚಿತ್ರಣ

  ಈವರೆಗೆ ರಾಜ್ಯದಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಒಬ್ಬ ರೈತ ಕೂಡ ಮೃತಪಟ್ಟಿಲ್ಲ ಎಂದು ರಾಜ್ಯಪಾಲರ ಬಳಿ ಸುಳ್ಳು ಹೇಳಿಸಿದ್ದಾರೆ. ರೈತರ ಪಂಪ್​​ಸೆಟ್​ಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿಲ್ಲ. ದಿನದಿಂದ ದಿನಕ್ಕೆ ರೈತರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮರೆಮಾಚಲು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಕಿಡಿಕಾರಿದ್ದಾರೆ.

  ಈ ಎಲ್ಲ ವಿಚಾರಗಳಿಗೆ ಜನರು ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಜೆಡಿಎಸ್ ಎನ್ ಡಿಎ ತೆಕ್ಕೆಗೆ ಬಂದಿದೆ. ಸುಖದ ಬಗ್ಗೆ ಆಲೋಚನೆ ಮಾಡುವವರು ಕಾಂಗ್ರೆಸ್‌ನವರು‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts