More

  ಪಾಕಿಸ್ತಾನ ಪರ ಘೋಷಣೆ; ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಕೂಡಲೇ ಬಂಧಿಸಿ: ವಿಜಯೇಂದ್ರ

  ಬೆಂಗಳೂರು: ಇಂದು (ಫೆಬ್ರವರಿ 27) ನಡೆದ ರಾಜ್ಯ ಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್​ ಪಾಳಯದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಗೆಲುವುದು ಸಾಧಿಸಿದ ಮೂವರು ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್​ನ ನಾಸೀರ್​ ಹುಸೇನ್​ ಬೆಂಬಲಿಗರು ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವ ಮೂಲಕ ಉದ್ಧಟತನ ಮೆರೆದಿದ್ದಾರೆ.

  ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ ಎಂದು ಹರಿಹಾಯ್ದಿದ್ದಾರೆ.

  ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ.

  ಇದನ್ನೂ ಓದಿ: ವಯನಾಡು ಕಾಡಾನೆ ದಾಳಿ ಪ್ರಕರಣ; ಕರ್ನಾಟಕದ ಪರಿಹಾರ ಬೇಡ ಎಂದ ಮೃತನ ಕುಟುಂಬಸ್ಥರು, ಕಾರಣ ಹೀಗಿದೆ?

  ರಾಜ್ಯ ಸಭೆಗೆ ಆಯ್ಕೆಮಾಡಿ ಕಳುಹಿಸಿರುವ ಸೈಯದ್ ನಾಸೀರ್ ಹುಸೇನ್ ಹಿಂದೆ ಇರುವ ಬೆಂಬಲಿಗರು ಪಾಕಿಸ್ತಾನಿ ಬೆಂಬಲಿತ ಉಗ್ರರೇ ಇರಬೇಕು, ‘ತನ್ನನು ರಕ್ಷಿಸಲು ತಮ್ಮ ಮನಃಸ್ಥಿತಿಯ ಕಾಂಗ್ರೆಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು’ ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು.

  ಸಾಕ್ಷಿಗಳೆಲ್ಲವೂ ಕಣ್ಣೆದುರಿಗೇ ಇರುವಾಗ ದೇಶ ವಿರೋಧಿಗಳನ್ನು ರಕ್ಷಿಸಲು ಯತ್ನಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ. ನಮ್ಮ ಮುಂದಿನ ಹೋರಾಟ ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts