More

    ಜನಸ್ಪಂದನೆಗೆ ಕಾಂಗ್ರೆಸ್‌ನಲ್ಲಿ ನಡುಕ: ವಿಜಯೇಂದ್ರ

    ಶಿವಮೊಗ್ಗ: ಸಿದ್ದರಾಮೋತ್ಸವದ ಬಳಿಕ ಮುಂದಿನ ಚುನಾವಣೆಯಲ್ಲಿ ಅಧಿಕಾರ ಪಡೆಯಬಹುದೆಂಬ ಆತ್ಮವಿಶ್ವಾಸದಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ದೊಡ್ಡಬಳ್ಳಾಪುರದಲ್ಲಿ ಜರುಗಿದ ನಮ್ಮ ಪಕ್ಷದ ಜನಸ್ಪಂದನ ಸಮಾವೇಶ ಆಘಾತ ನೀಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
    ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸ್ಪಂದನ ಸಮಾವೇಶಕ್ಕೆ ಸೇರಿದ್ದ ಲಕ್ಷಾಂತರ ಮಂದಿಯನ್ನು ಗಮನಿಸಿದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಂತಾದವರಲ್ಲಿ ನಡುಕ ಹುಟ್ಟಿದೆ. ಎದುರಾಳಿಗಳಿಗೆ ಆಘಾತವಾಗಿದೆ ಎಂದು ಅಭಿಪ್ರಾಯಪಟ್ಟರು.
    ಮತದಾರರು ಪ್ರಜ್ಞಾವಂತರಾಗಿದ್ದಾರೆ. ಯಾರನ್ನು ಗೆಲ್ಲಿಸಿದರೆ ಒಳ್ಳೆಯ ಸರ್ಕಾರ ಬರುತ್ತದೆ ಎಂಬುದು ಜನರಿಗೆ ತಿಳಿಸಿದೆ. ಬಿಎಸ್‌ವೈ ನೇತೃತ್ವದಲ್ಲಿ ಪಕ್ಷದ ನಾಯಕರು ರಾಜ್ಯಾಧ್ಯಂತ ಪ್ರವಾಸ ಮಾಡಿ 140 ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ರಾಜ್ಯದಲ್ಲೇ ಕ್ರಿಯಾಶೀಲನಾಗಿದ್ದೇನೆ
    ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯದಲ್ಲೇ ನಾನು ಕ್ರಿಯಾಶೀಲನಾಗಿದ್ದೇನೆ. ಸೆ.19ರಂದು ಸೊರಬದಲ್ಲಿ ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಶಿಕಾರಿಪುರದಲ್ಲಿ ಈಗಾಗಲೇ ಹೆಚ್ಚಿನ ಚಟುವಟಿಕೆ ಆರಂಭಿಸಿದ್ದೇನೆ. ಅಲ್ಲಿ ನನ್ನ ಚುನಾವಣೆ ಸ್ಪರ್ಧೆ ಬಗ್ಗೆ ಸೂಕ್ತ ಸಮಯದಲ್ಲಿ ವರಿಷ್ಠರು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದರು.
    ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರಕೋಟೆ. ಆದರೆ ಭದ್ರಾವತಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಸಿಗುತ್ತದೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಅಲ್ಲಿ ಗೆಲ್ಲುವುದು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸಿದ್ದೇವೆ ಎಂದು ಹೇಳಿದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts