More

    ಕಾನ್ಪುರ ಪೊಲೀಸರ​ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ ವಿಕಾಸ್​ ದುಬೆ ಎನ್​ಕೌಂಟರ್​

    ಲಖನೌ: ಕಾನ್ಪುರ ಸಮೀಪದ ಬಿಕ್ರು ಗ್ರಾಮದಲ್ಲಿ ನಡೆದ ಎಂಟು ಪೊಲೀಸರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ ಗ್ಯಾಂಗ್​ಸ್ಟರ್​​ ವಿಕಾಸ್​ ದುಬೆ ಪೊಲೀಸ್​ ಎನ್​ಕೌಂಟರ್​ನಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಉತ್ತರ ಪ್ರದೇಶ ಪೊಲೀಸರು ಮಾಹಿತಿ ಖಚಿತಪಡಿಸಿದ್ದಾರೆ.

    ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆಯೇ ಕಾನ್ಪುರದ ಸಾಚೆಂಡಿ ಗಡಿಯಲ್ಲಿ ಎನ್​ಕೌಂಟರ್​ ನಡೆದಿದೆ. ಕಾನ್ಪುರಕ್ಕೆ ತೆರಳುವ ಮಾರ್ಗ ಮಧ್ಯೆ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯ (ಎಸ್​ಟಿಎಫ್​) ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಿಕಾಸ್​ ದುಬೆ ಮೇಲೆ ಪೊಲೀಸರು ಎನ್​ಕೌಂಟರ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್​ ಕಾನ್ಸ್​ಟೇಬಲ್​ಗಳು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ನಟೋರಿಯಸ್‌ ರೌಡಿ ವಿಕಾಸ್‌ ದುಬೆಯ ಭಯಂಕರ ಹಿಸ್ಟರಿ ಇಲ್ಲಿದೆ…

    ಗಂಭೀರವಾಗಿ ಗಾಯಗೊಂಡಿದ್ದ ವಿಕಾಸ್​ ದುಬೆಯನ್ನು ತಕ್ಷಣ ಲಾಲಾ ಲಜಪತ್​ ರಾಯ್​ ಅಥವಾ ಹಲ್ಲೆಟ್​ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಗಂಭೀರ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ.

    ತಲೆಮರೆಸಿಕೊಂಡಿದ್ದ ಆರೋಪಿ ವಿಕಾಸ್​ ದುಬೆಯನ್ನು ಮಧ್ಯಪ್ರದೇಶದ ಉಜ್ಜೈನ್‌ನಲ್ಲಿ ಬಂಧಿಸುವಲ್ಲಿ ಪೊಲೀಸರು ನಿನ್ನೆಯಷ್ಟೇ ಯಶಸ್ವಿಯಾಗಿದ್ದರು. ನಿನ್ನೆ ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್​ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದ. ಅಲ್ಲಿಯ ಭದ್ರತಾ ಸಿಬ್ಬಂದಿ ಈತನನ್ನು ಗುರುತಿಸಿ ಗುಟ್ಟಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಸ್ಥಾನದಿಂದ ಹೊರ ಬರುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿದ್ದರು. ಆತನನ್ನು ಇಂದು ಬೆಳಗ್ಗೆ ಕಾನ್ಪುರಕ್ಕೆ ಕರೆತರುವಾಗ ಮಾರ್ಗ ಮಧ್ಯೆ ತಪ್ಪಿಸಿಕೊಳ್ಳಲು ಯತ್ನಿಸಿ, ಎನ್​ಕೌಂಟರ್​ನಲ್ಲಿ ಬಲಿಯಾಗಿದ್ದಾನೆ.

    ಇದನ್ನೂ ಓದಿ: ಕ್ರಿಮಿನಲ್​ ವಿಕಾಸ್​ ದುಬೆಯ ಪತ್ನಿ, ಮಗನೂ ಅರೆಸ್ಟ್​…

    ಘಟನೆ ಹಿನ್ನೆಲೆ ಏನು?
    ಕಾನ್ಪುರ ಸಮೀಪದ ಡಿಕ್ರು ಗ್ರಾಮದಲ್ಲಿ ವಿಕಾಸ್ ದುಬೆ ಎಂಬ ಕ್ರಿಮಿನಲ್ ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡ ಆತನ ಬಂಧನಕ್ಕೆ ಬಲೆ ಬೀಸಿತ್ತು. ವಿಕಾಸ್ ದುಬೆ 60 ಅಪರಾಧ ಪ್ರಕರಣಗಳಲ್ಲಿ ಬೇಕಾದವನಾಗಿದ್ದ. ಜುಲೈ 3ರ ತಡ ರಾತ್ರಿ ಕಾರ್ಯಾಚರಣೆ ಆರಂಭವಾಗಿತ್ತು. ಅಂದು ನಸುಕಿನ ವೇಳೆ ವಿಕಾಸ್​ ದುಬೆಯ ಅಡಗುದಾಣದ ರೂಫ್​ ಟಾಪ್​ನಿಂದ ಗುಂಡಿನ ದಾಳಿ ನಡೆದಿತ್ತು. ಇದರಲ್ಲಿ ಡಿಎಸ್​ಪಿ ಸೇರಿದಂತೆ 8 ಪೊಲೀಸರ ಹತ್ಯೆ ನಡೆದಿತ್ತು. (ಏಜೆನ್ಸೀಸ್​)

    ಮಹಾಕಾಲ ದೇವಾಲಯದ ಸಮೀಪವೇ ಮಹಾ ಪಾತಕಿ ದುಬೆ ಅರೆಸ್ಟ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts