More

    ಸೆಂಟ್ರಲ್ ಕ್ಷೇತ್ರದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

    ಹುಬ್ಬಳ್ಳಿ : ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 39 ರ ಸಾಗರ ಕಾಲನಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾಧನೆಗಳನ್ನು ಬಿಂಬಿಸುವ ‘ ಮೋದಿ ಸರ್ಕಾರದ ಗ್ಯಾರಂಟಿ : ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ 400ಕ್ಕೂ ಹೆಚ್ಚು ಜನಪರ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಿ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಹೇಳಿದರು.

    ದೇಶದ ಜನರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡಿದ ಪ್ರಧಾನಿ ಮೋದಿ, ವಿದೇಶಗಳಿಗೂ ಲಸಿಕೆ ನೀಡಿದರು. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ, ಬ್ಯಾಂಕ್​ನಲ್ಲಿ ಖಾತೆ ರಹಿತ ಬಡ ಜನರಿಗೆ ಜನಧನ ಖಾತೆಯನ್ನು ತೆರೆಯಲಿಕ್ಕೆ ಅನುಕೂಲ ಮಾಡಿಕೊಟ್ಟರು. ಮಹಿಳೆಯರಿಗಾಗಿ ಸಂಧ್ಯಾ ಸುರಕ್ಷಾ ಯೋಜನೆ, ಬೇಟಿ ಪಡಾವ್, ಬೇಟಿ ಬಚಾವ್, ಮೇಕ್ ಇನ್ ಇಂಡಿಯಾ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದರು ಎಂದು ತಿಳಿಸಿದರು.

    ಧಾರವಾಡ ಲೋಕಸಭೆ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯಲ್ಲಿ ಉತ್ತಮ ಕಾಂಕ್ರೀಟ್ ರಸ್ತೆ ನಿರ್ವಿುಸಿದ್ದಾರೆ. ಸುಮಾರು 600 ಸರ್ಕಾರಿ ಶಾಲೆಗಳಿಗೆ ಸುಣ್ಣ ಬಣ್ಣ ಮತ್ತು ಡೆಸ್ಕ್​ಗಳನ್ನು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಗಾಗಿ 350 ಕೋಟಿ ರೂ.ಕ್ಕೂ ಹೆಚ್ಚು ಅನುದಾನ ತಂದಿದ್ದಾರೆ ಎಂದು ಹೇಳಿದರು.

    ಪಾಲಿಕೆ ಸದಸ್ಯೆ ಸೀಮಾ ಮೊಗಲಿಶೆಟ್ಟರ, ಪ್ರಮುಖರಾದ ಸಿದ್ದು ಮೊಗಲಿಶೆಟ್ಟರ, ಅಶೋಕ ವಾಲ್ಮೀಕಿ, ರವಿ ನಾಯಕ, ರಘು ಧಾರವಾಡಕರ, ಸವಿತಾ ದೀಕ್ಷಿತ, ಸಮ್ಮದ್ ಶೇಕ್ ಹಾಗೂ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts