More

    ಗ್ರಾಮ ಸ್ವರಾಜ್ ಸಮಾವೇಶ

    ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಆ ನಿಟ್ಟಿನಲ್ಲಿ ಡಿ. 2ರಂದು ಪಕ್ಷದ ವತಿಯಿಂದ ಗ್ರಾಮ ಸ್ವರಾಜ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ಗ್ರಾಮೀಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

    ನಗರದ ಪಕ್ಷದ ಕಾರ್ಯಾಲ ಯದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಡಿ. 2ರಂದು ಬೆಳಗಾವಿ ವಿಧಾನಸಭಾ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆಗೆ ಹಾಗೂ ಸವದತ್ತಿ ವಿಧಾನ ಸಭಾ ಕ್ಷೇತ್ರದ ಸವದತ್ತಿ ಪಟ್ಟಣದಲ್ಲಿ ಮಧ್ಯಾಹ್ನ 2 ಗಂಟೆಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ಗ್ರಾಪಂ ಚುನಾವಣೆಯು ಬೂತ್ ಮಟ್ಟದಲ್ಲಿ ನಮ್ಮ ಪಕ್ಷ ಬಲಪಡಿಸುವುದಕ್ಕೆ ಸಿಕ್ಕಿರುವ ಒಂದು ಅವಕಾಶವೆಂದು ಪರಿಗಣಿಸಲಾಗಿದೆ. ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ 14 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಅಲ್ಲದೆ, ಕೇಂದ್ರ ಹಾಗೂ ರಾಜ್ಯ ಎರಡರಲ್ಲೂ ನಮ್ಮದೇ ಸರ್ಕಾರ ಇದೆ. ಹೀಗಾಗಿ 481 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಮತ್ತು ಸಂಘಟನೆಗೆ ಸಹಕಾರಿಯಾಗಲಿದೆ ಎಂದರು.
    ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ಸಚಿವರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಶಶಿಕಲಾ ಜೊಲ್ಲೆ, ರಮೇಶ ಜಾ ರಕಿಹೊಳಿ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಶಿವರಾಂ ಹೆಬ್ಬಾರ, ಸಂಸದರಾದ ಅನಂತಕುಮಾರ ಹೆಗಡೆ, ಶಿವಕುಮಾರ ಉದಾಸಿ, ಅಣ್ಣಾಸಾಹೇಬ ಜೊಲ್ಲೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ಧ್ದರಾಜು, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ.ಸಂದೀಪ ಇತರರು ಆಗಮಿಸಲಿದ್ದಾರೆ ಎಂದು ಸಂಜಯ ಪಾಟೀಲ ತಿಳಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಮೋಹಿತೆ, ರಾಜು ಚಿಕ್ಕನಗೌಡರ, ಸುಭಾಷ ಪಾಟೀಲ, ಎಫ್.ಎಸ್.ಸಿದ್ಧನಗೌಡರ, ಮಲ್ಲಿಕಾರ್ಜುನ ಮಾದಮ್ಮನವರ, ಸಂಜಯ ಕಂಚಿ ಇತರರು ಇದ್ದರು.

    ಡಿ. 2ರಂದು ಬೆಳಗಾವಿಯ ಬಸ್ತವಾಡ ಹಾಗೂ ಸವದತ್ತಿಯಲ್ಲಿ ಗ್ರಾಮ ಸ್ವರಾಜ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗ್ರಾಪಂ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಅನುಮತಿ ಪಡೆದು ಕಾರ್ಯಕ್ರಮ ನಡೆಸಲಾಗುವುದು.
    | ರಮೇಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts