More

    ಗ್ರಾಮಗಳಿಗೆ ಜಲದಿಗ್ಬಂಧನ

    ಚಿಕ್ಕೋಡಿ: ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಪಕ್ಕದ ಮಹಾರಾಷ್ಟ್ರದ ಕೊಯ್ನ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ನದಿಪಾತ್ರದ ಜನರಿಗೆ ಮತ್ತೆ ಪ್ರವಾಹ ಆತಂಕ ಎದುರಾಗಿದೆ. ಯಡೂರ-ಕಲ್ಲೋಳ, ಮಲಿಕವಾಡ-ದತ್ತವಾಡ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.

    ತಾಲೂಕಿನ ಉಮರಾಣಿ ಗ್ರಾಮದ ಅನೇಕ ರೈತರ ಜಮೀನುಗಳು ಜಲಾವೃತಗೊಂಡಿದ್ದು, ಗೋವಿನ ಜೋಳ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿದೆ. ಚಂದೂರ ಗ್ರಾಮದ ಅವಂದೂರ ಸಾವಳೆ ಎಂಬುವರ ಮನೆ ಬುಧವಾರ ರಾತ್ರಿ ಕುಸಿದು, 3 ಎಮ್ಮೆ ಮೃತಪಟ್ಟಿವೆ. ದೂಧಗಂಗಾ ನದಿಯಿಂದ 11,616 ಕ್ಯೂಸೆಕ್, ರಾಜಾಪುರ ಬ್ಯಾರೇಜ್‌ನಿಂದ 53,500 ಕ್ಯೂಸೆಕ್ ಸೇರಿ ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಲಮಟ್ಟಿ ಜಲಾಶಯದಿಂದ 1,17,000 ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts