More

    ಗ್ರಾಮಗಳು ಪ್ಲಾಸ್ಟಿಕ್ ಮುಕ್ತವಾಗಿರಲಿ – ಜಗದೀಶ ಐ.ಎಚ್.

    ಬೆಳಗಾವಿ: ಮನೆಯಲ್ಲೇ ಕಸವನ್ನು ಬೇರ್ಪಡಿಸಿ ಗ್ರಾಮಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಾರ್ವಜನಿಕರು ಸಹಕರಿಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿಕ್ಕೋಡಿ ವಿಭಾಗೀಯ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಹೇಳಿದರು.

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಚಿಕ್ಕೋಡಿ ವಿಭಾಗ, ಬೆಳಗಾವಿಯ ಡಾ. ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರ ಸಹಯೋಗದಲ್ಲಿ ಹುಕ್ಕೇರಿ ತಾಲೂಕಿನ ಕರಗುಪ್ಪಿಯಲ್ಲಿ ಶುಕ್ರವಾರ ಆಯೋಜಿಸಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಕರೆಗಳಿಗೆ ಉತ್ತರಿಸಿ ಮಾತನಾಡಿದರು.

    ಪ್ಲಾಸ್ಟಿಕ್ ಸುಡುವುದರಿಂದ ಮಕ್ಕಳಿಗೆ ಅಂಗವೈಕಲ್ಯ, ಹೆಣ್ಣು ಮಕ್ಕಳಲ್ಲಿ ಹಾರ್ಮೋನ್, ಶ್ವಾಸಕೋಶ ಮತ್ತಿತರ ಸಮಸ್ಯೆಗಳು ಉಂಟಾಗುತ್ತವೆ. ಈ ಸಂಬಂಧ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು ಎಂದು ಡಾ. ಸ.ಜ.ನಾಗಲೋಟಿಮಠ ವಿಜ್ಞಾನ ಕೇಂದ್ರದ ರಾಜಶೇಖರ ಪಾಟೀಲ ಹೇಳಿದರು.

    ಪ್ಲಾಸ್ಟಿಕ್ ಹಾವಳಿ, ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಸಮಸ್ಯೆಗಳು, ಪರಿಹಾರ ಸಂಬಂಧಿಸಿದ ವಿಷಯದ ಕುರಿತು ವಿವಿಧ ಗ್ರಾಮಗಳಿಂದ 13 ಸಾರ್ವಜನಿಕರು ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಂಡರು. ಅನ್ನಪೂರ್ಣಾ ಬುಚಡಿ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts