More

  ದೇವಸ್ಥಾನದ ವಿಮಾನ ಗೋಪುರ ಉದ್ಘಾಟನೆ ಇಂದು

  ಪಾಂಡವಪುರ: ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪಟ್ಟಲದಮ್ಮ ದೇವಸ್ಥಾನದ ವಿಮಾನ ಗೋಪುರ, ಬೋರೇದೇವರ ದೇವಸ್ಥಾನ ಜೀಣೋದ್ಧಾರ ಹಾಗೂ ಸಮುದಾಯ ಭವನ, ಬಯಲು ರಂಗಮಂದಿರ ಲೋಕಾರ್ಪಣೆ ಕಾರ್ಯಕ್ರಮ ಫೆ.17 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

  ಅಂದು ಬೆಳಗ್ಗೆ 8ಕ್ಕೆ ವೇದ ಪಾರಾಯಣದೊಂದಿಗೆ ಗಣಪತಿ, ನವಗ್ರಹ, ಮೃತ್ಯುಂಜಯ, ಮಹಾಕಾಳಿ, ಮಹಾಲಕ್ಷ್ಮೀ, ಮಹಾಸರಸ್ವತಿ ಮತ್ತು ಶಾಂತಿ ದೇವತೆಗಳ ಹೋಮ-ಹವನ ಜರುಗಲಿದೆ. ಬಳಿಕ ಶುಭ, ಮೇಷ ಲಗ್ನದಲ್ಲಿ ಮಹಾಕುಂಭಾಭಿಷೇಕ, ಅಲಂಕಾರ, ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮತ್ತು ಸುಮಾರು 5 ಸಾವಿರ ಜನರಿಗೆ ಅನ್ನ ಸಂತರ್ಪಣೆ ನಡೆಸಲಾಗುವುದು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಕೆಪಿಸಿಸಿ ಸದಸ್ಯ ಎಚ್.ತ್ಯಾಗರಾಜು ಇತರರು ಭಾಗವಹಿಸಲಿದ್ದಾರೆ.

  ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಗಿಚ್ಚಿ ಗಿಲಿಗಿಲಿಯ ಖ್ಯಾತಿಯ ಕಲಾವಿದರಾದ ಚಂದ್ರಪ್ರಭಾ, ಗೊಬ್ಬರಗಾಲ ಹಾಗೂ ಶಾಂತ ನಂಜುಂಡಸ್ವಾಮಿ ಅವರಿಂದ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಗ್ರಾಮದ ಮುಖಂಡರಾದ ಎಚ್.ಜೆ.ರಾಮಕೃಷ್ಣ ಮನವಿ ಮಾಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts