ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೆಸ್, ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಪ್ರಮುಖರನ್ನು ತಮ್ಮತ್ತ ಸೆಳೆಯುತ್ತಿವೆ. ಇದೆಲ್ಲದರ ನಡುವೆಯೇ ಪ್ಯಾರಿಸ್ ಒಲಿಂಪಿಕ್ಸ್ ಪದಕ ವಂಚಿತೆ ವಿನೇಶ್ ಪೋಗಟ್ ಹಾಗೂ ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಜೋರಾಗಿ ಹರಿದಾಡುತ್ತಿದೆ.
ವಿನೇಶ್ ಹಾಗೂ ಭಜರಂಗ್ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರು ಸ್ಫರ್ಧಿಸುವ ವಿಚಾರಕ್ಕೆ ಪುಷ್ಠಿ ನೀಡಿದಂತಾಗಿದೆ. ಇಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ವಿನೇಶ್ ಫೋಗಟ್ ರಾಹುಲ್ ಗಾಂಧಿ ಭೇಟಿಯಾದ ಚಿತ್ರಗಳನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
नेता विपक्ष श्री @RahulGandhi से विनेश फोगाट जी और बजरंग पुनिया जी ने मुलाकात की। pic.twitter.com/UK7HW6kLEL
— Congress (@INCIndia) September 4, 2024
ಇದನ್ನೂ ಓದಿ: ಪಾಕ್ ವಿರುದ್ಧ ಐತಿಹಾಸಿಕ ಗೆಲುವು; ಸರಣಿಶ್ರೇಷ್ಠ ಪ್ರಶಸ್ತಿಯನ್ನು ಹುತಾತ್ಮ ವಿದ್ಯಾರ್ಥಿಗಳಿಗೆ ಅರ್ಪಿಸಿದ ಬಾಂಗ್ಲಾ ಆಟಗಾರ
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಹರಿಯಾಣ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಬಾರಿಯಾ ಪೂನಿಯಾ, ವಿನೇಶ್ ಫೋಗಟ್ ಪಕ್ಷದ ಅಭ್ಯರ್ಥಿಗಳಾಗಿ ವಿಧಾನಸಭೆ ಚುನಾವಣೆ ಕಣಕ್ಕಿಳಿಯುವ ಕುರಿತು ಗುರುವಾರದ ಹೊತ್ತಿಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಿದ್ದಾರೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಜೂಲಾನಾ ಕ್ಷೇತ್ರದಿಂದ ವಿನೇಶ್, ಬದ್ಲಿ ಕ್ಷೇತ್ರದಿಂದ ಭಜರಂಗ್ ಪೂನಿಯಾ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಗುರುವಾರ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಹರಿಯಾಣ ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠಯಾಗಿ ಸ್ವೀಕರಿಸಿರುವ ಕಾಂಗ್ರೆಸ್ ರಾಜ್ಯವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ಸರಣಿ ಸಭೆಗಳನ್ನು ನಡೆಸುತ್ತಿದೆ.