ಒಲಿಂಪಿಕ್ಸ್​ನಲ್ಲಿ ಸೆಮಿಫೈನಲ್​​ಗೆ ತಲುಪಿದ ವಿನೇಶ್ ಫೋಗಟ್: ಕೇಂದ್ರಕ್ಕೆ ಟಾಂಗ್ ಕೊಟ್ಟ ಸಾಕ್ಷಿ, ಬಜರಂಗ್‌ ಪೂನಿಯ!

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಕುಸ್ತಿ ಪಂದ್ಯದ ಮಹಿಳೆಯರ 50 ಕೆಜಿ ವಿಭಾಗದ ವಿನೇಶ್ ಫೋಗಟ್ ವಿಭಾಗದ ಉಕ್ರೇನ್‌ನ ಒಕ್ಸಾನಾ ಲಿವಾಚ್ ಅವರನ್ನು 7-5 ರಿಂದ ಸೋಲಿಸಿ ಸೆಮಿಫೈನಲ್​​​ಗೆ ತಲುಪಿದ್ದಾರೆ. ನಾಲ್ಕು ಬಾರಿಯ ವಿಶ್ವ ಚಾಂಪಿಯನ್ ಮತ್ತು ಒಲಂಪಿಕ್ ಚಿನ್ನದ ಪದಕ ವಿಜೇತ ಯುಯಿ ಸುಸಾಕಿ ವಿರುದ್ಧ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: 2030ರಲ್ಲೂ ನಾವಿಲ್ಲೇ ಇರುತ್ತೇವೆ; ನೀವಲ್ಲೇ..ಇರುತ್ತಿರಿ ! ಸಂಸತ್​ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್

ಇದರ ಬೆನ್ನೆಲ್ಲೇ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌ ಮತ್ತು ಬಜರಂಗ್‌ ಪೂನಿಯ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.

ಜಗತನ್ನೇ ಗೆಲ್ಲಲು ಹೊರಟಿರುವ ವಿನೇಶಾ ಫೋಗಟ್ ಹಿಂದೊಮ್ಮೆ ತನ್ನದೇ ದೇಶದಲ್ಲಿ ಸೋಲು ಎದುರಿಸಿದ್ದಳು. ಲೈಗಿಂಕ ಕಿರುಕುಳದ ವಿರುದ್ಧ ನ್ಯಾಯಕ್ಕಾಗಿ ಹೋರಾಡಿದ್ದ ಈಕೆಯ ಮೇಲೆ ತನ್ನದೇ ದೇಶದಲ್ಲಿ ಲಾಠಿಯಿಂದ ಹೊಡೆದು ದಮನಿಸಲಾಗಿತ್ತು. ಬೀದಿಯಲ್ಲಿ ಎಳೆದಾಡಿ ತುಳಿದು ಅವಾಮಾನಿಸಲಾಗಿತ್ತು. ಇಂದು ಈ ಹುಡುಗಿಯ ಸಾಧನೆಯ ಮುಂದೆ ದೇಶದ ವ್ಯವಸ್ಥೆ ಸೋಲು ಕಂಡಿದೆ” ಎಂದು ಬಜರಂಗ್‌ ತಮ್ಮ ಎಕ್ಸ್ ಬರೆದುಕೊಂಡಿದ್ದಾರೆ.

ಒಲಿಂಪಿಕ್ಸ್​ನಲ್ಲಿ ಸೆಮಿಫೈನಲ್​​ಗೆ ತಲುಪಿದ ವಿನೇಶ್ ಫೋಗಟ್: ಕೇಂದ್ರಕ್ಕೆ ಟಾಂಗ್ ಕೊಟ್ಟ ಸಾಕ್ಷಿ, ಬಜರಂಗ್‌ ಪೂನಿಯ!

ಸಾಕ್ಷಿ ಮಲಿಕ್‌ ಕೂಡ ಟ್ವೀಟ್​ ಮಾಡಿ, ಅನ್ಯಾಯದ ವಿರುದ್ಧ ಧ್ವನಿ ಎತ್ತಿದಾಗ ಈ ಹುಡುಗಿಯನ್ನು ಯಾರು ಬೆಂಬಲಿಸಿಲ್ಲ. ಇಂದು ಇದೇ ಹುಡುಗಿ ದೇಶದ ಧ್ವಜವನ್ನು ಮತ್ತು ಹೆಸರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾಳೆ ಎಂದು ಬರೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಒಲಿಂಪಿಕ್ಸ್​ನಲ್ಲಿ ಸೆಮಿಫೈನಲ್​​ಗೆ ತಲುಪಿದ ವಿನೇಶ್ ಫೋಗಟ್: ಕೇಂದ್ರಕ್ಕೆ ಟಾಂಗ್ ಕೊಟ್ಟ ಸಾಕ್ಷಿ, ಬಜರಂಗ್‌ ಪೂನಿಯ!

ಏತನ್ಮಧ್ಯೆ, ಭಾರತದ ಪ್ರಸಿದ್ಧ ಕುಸ್ತಿಪಟು ಮಹಾವೀರ್ ಫೋಗಟ್ ತನ್ನ ಸೋದರ ಸೊಸೆ ವಿನೇಶ್ ಫೋಗಟ್ ತನ್ನ ದೇಶಕ್ಕಾಗಿ ಚಿನ್ನದ ಪದಕವನ್ನು ಗೆಲ್ಲುವ ತನ್ನ ಕನಸನ್ನು ನನಸಾಗಿಸುವ ಆಶಾವಾದವನ್ನು ವ್ಯಕ್ತಪಡಿಸಿದ್ದಾರೆ.

ಒಲಿಂಪಿಕ್ಸ್​ನಲ್ಲಿ ಸೆಮಿಫೈನಲ್​​ಗೆ ತಲುಪಿದ ವಿನೇಶ್ ಫೋಗಟ್: ಕೇಂದ್ರಕ್ಕೆ ಟಾಂಗ್ ಕೊಟ್ಟ ಸಾಕ್ಷಿ, ಬಜರಂಗ್‌ ಪೂನಿಯ!

ವಿನೇಶ್ ಫೋಗಟ್ ಅವರು ಕುಸ್ತಿಯಲ್ಲಿ ಒಲಿಂಪಿಕ್ ಸೆಮಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೆ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. ಇಂದು ರಾತ್ರಿ 10.15ಕ್ಕೆ ನಡೆಯುವ ಫೈನಲ್​ ಪಂದ್ಯದಲ್ಲಿ ವಿನೇಶ್​ ಅವರು ಯುಸ್ನಿಲಿಸ್ ಗುಜ್ಮಾನ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಪಿಎಸ್‌ಐ ಆತ್ಮಹತ್ಯೆ ಪರಶುರಾಮ ಪ್ರಕರಣ ಸಿಬಿಐಗೆ ವಹಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

Share This Article

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ