ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಭಾಷಣದಲ್ಲಿ ಪ್ರಥಮ

Bel_Bhashana
Published on

ಬೆಳ್ತಂಗಡಿ: ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು 15000 ರೂ. ನಗದು ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net