More

    ಕುಡಿದು ವಾಹನ ಚಲಾಯಿಸಿ ಅಪಘಾತ; ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ

    ಮುಂಬೈ: ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಅಪಘಾತ ಪ್ರಕರಣದ ವೇಳೆ 50 ವರ್ಷದ ವಿನೋದ್ ಕಾಂಬ್ಳಿ ಪಾನಮತ್ತರಾಗಿದ್ದು ದೃಢಪಟ್ಟಿತ್ತು. ಇದರಿಂದ ಅವರನ್ನು ಬಂಧಿಸಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಯಿತು.

    ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 185 ಅಡಿಯಲ್ಲಿ (ಮೋಟಾರು ಕಾಯ್ದೆ) ಕಾಂಬ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಯ ಬಳಿಕ ಕಾಂಬ್ಳಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.

    ಕಾರಿಗೆ ಢಿಕ್ಕಿ ಹೊಡೆದ ಬಳಿಕ ಕಾಂಬ್ಳಿ ಕಾಂಪ್ಲೆಕ್ಸ್‌ನ ಕಾವಲುಗಾರ ಮತ್ತು ಸ್ಥಳೀಯ ನಿವಾಸಿಗಳ ಜತೆಗೂ ಜಗಳವಾಡಿದ್ದರು ಎಂದು ದೂರಲಾಗಿದೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಆಪ್ತ ಸ್ನೇಹಿತರಾಗಿರುವ ಕಾಂಬ್ಳಿ, ಭಾರತ ಪರ 17 ಟೆಸ್ಟ್ ಮತ್ತು 104 ಏಕದಿನ ಪಂದ್ಯವಾಡಿದ್ದಾರೆ.

    ಐಪಿಎಲ್ ಟೂರ್ನಿಗೆ ಹೊಸ ಸ್ವರೂಪ; ಒಂದೇ ಗುಂಪಿನಲ್ಲಿ ಆರ್‌ಸಿಬಿ, ಸಿಎಸ್‌ಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts