L.S. Polls | ಅಂತಿಮ ಹಂತದ ಮತದಾನದ ವೇಳೆ ಹಿಂಸಾಚಾರ: ಇವಿಎಂ ಕೊಳಕ್ಕೆ ಎಸೆದು ದುಷ್ಕೃತ್ಯ

west benagl

ಪಶ್ಚಿಮ ಬಂಗಾಳ: ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಇಂದು(ಜೂ.01) ಏಳನೇ ಹಂತದಲ್ಲಿ ಮತದಾನ ಚಾಲ್ತಿಯಲ್ಲಿರುವಂತೆಯೇ ಇತ್ತ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ ವರದಿಯಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ 13 ಮಂದಿ ಚುನಾವಣಾ ಸಿಬ್ಬಂದಿ ಸಾವು!

ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು ನಡೆಯುತ್ತಿದ್ದು, 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡು ಒಟ್ಟು 57 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಕೋಲ್ಕತ್ತಾ ಬಳಿಯ ಜಾದವ್‍ಪುರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಭಾಂಗಾರ್‌ನ ಸತುಲಿಯಾ ಪ್ರದೇಶದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‍ಎಫ್) ಮತ್ತು ಸಿಪಿಐ(ಎಂ) ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಐಎಸ್‍ಎಫ್ ಸದಸ್ಯರು ಗಾಯಗೊಂಡಿದ್ದಾರೆ. ಅಲ್ಲದೇ ನಾಡ ಬಾಂಬ್‍ಗಳ ಎಸೆತದಿಂದ ಘರ್ಷಣೆ ಇನ್ನೂ ಉಲ್ಬಣಗೊಂಡಿದೆ.

ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ, ಕೋಪಗೊಂಡ ಜನಸಮೂಹವು ಕೆಲವು ಮತಗಟ್ಟೆ ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಿದ್ದು, ನಂತರ ಮತಗಟ್ಟೆಗಳಿಗೆ ಬಲವಂತವಾಗಿ ನುಗ್ಗಿ, ಇವಿಎಂ ವಶಪಡಿಸಿಕೊಂಡು ಹತ್ತಿರದ ಕೊಳಕ್ಕೆ ಎಸೆದಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಮತಯಂತ್ರವನ್ನು ಕೊಳಕ್ಕೆ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಮುಂಜಾನೆ 6:40ರ ವೇಳೆಗೆ ಬೇನಿಮಾಧವಪುರ ಎಫ್‍ಪಿ ಶಾಲೆಯ ಬಳಿ ಸೆಕ್ಟರ್ ಆಫೀಸರ್ ರಿಸರ್ವ್ ಇವಿಎಂಗಳು ಮತ್ತು ಪೇಪರ್​ಗಳನ್ನು ಜಯನಗರ (ಎಸ್‍ಸಿ) ಪಿಸಿಯ ಕುಲ್ತಾಳಿಯಲ್ಲಿ ಸ್ಥಳೀಯ ಜನರ ಗುಂಪು ಲೂಟಿ ಮಾಡಿದ್ದಾರೆ ಮತ್ತು 1 ಸಿಯು, 1 ಬಿಯು, 2 ವಿವಿಪ್ಯಾಟ್ ಯಂತ್ರಗಳನ್ನು ಸಮೀಪದ ಕೊಳಗಳಿಗೆ ಎಸೆದಿದ್ದಾರೆ. ಕೂಡಲೇ ಹೊಸ ಇವಿಎಂಗಳನ್ನು ಆ ಮತಗಟ್ಟೆಗಳಿಗೆ ಒದಗಿಸಲಾಗಿದೆ. ಇವಿಎಂಗಳನ್ನು ಕೊಳಕ್ಕೆ ಎಸೆದವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಂದೇಶ್‍ಖಾಲಿ ಸೇರಿದಂತೆ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಭದ್ರಕೋಟೆಯಾಗಿರುವ ಡೈಮಂಡ್ ಹಾರ್ಬರ್ ಟಿಎಂಸಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಘಟನೆಯನ್ನು ಬಿಜೆಪಿ ಅಭ್ಯರ್ಥಿ ಅಭಿಜಿತ್ ದಾಸ್ ಟಿಎಂಸಿ ದುಷ್ಕೃತ್ಯ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಟಿಎಂಸಿ ಸ್ಪಷ್ಟವಾಗಿ ನಿರಾಕರಿಸಿದೆ.

ಭಾರತದ ಚುನಾವಣಾ ಆಯೋಗದ ಪ್ರಕಾರ, ಸರಿಸುಮಾರು 5.24 ಕೋಟಿ ಪುರುಷರು, 4.82 ಕೋಟಿ ಮಹಿಳೆಯರು ಮತ್ತು 3574 ತೃತೀಯ ಲಿಂಗ ಮತದಾರರು ಸೇರಿದಂತೆ 10.06 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುವ ನಿರೀಕ್ಷೆಯಿದೆ. ಬಿಹಾರ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಏಳು ರಾಜ್ಯಗಳಲ್ಲಿ ಮತದಾನ ನಡೆಯಲಿದೆ. ಒಡಿಶಾ ರಾಜ್ಯ ವಿಧಾನಸಭೆಯ ಉಳಿದ 42 ವಿಧಾನಸಭಾ ಕ್ಷೇತ್ರಗಳಿಗೂ ಏಕಕಾಲದಲ್ಲಿ ಮತದಾನ ನಡೆಯಲಿದೆ.

ಪಂಜಾಬ್‌ನ ಎಲ್ಲಾ 13 ಲೋಕಸಭಾ ಕ್ಷೇತ್ರಗಳು, ಉತ್ತರಪ್ರದೇಶದ 13 ಕ್ಷೇತ್ರಗಳು, ಪಶ್ಚಿಮ ಬಂಗಾಳ 09, ಬಿಹಾರ 08, ಒಡಿಶಾ06, ಹಿಮಾಚಲ ಪ್ರದೇಶ04, ಜಾರ್ಖಂಡ್03, ಕೇಂದ್ರಾಡಳಿ ಪ್ರದೇಶದ ಚಂಡೀಗಢ 01 ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. 5.24 ಕೋಟಿ ಪುರುಷ, 4.82 ಮಹಿಳೆಯರು ಸೇರಿ 10.06 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಲೋಕಸಭೆ ಚುನಾವಣೆ: ಮತಗಟ್ಟೆ ಸಮೀಕ್ಷೆ ಕುರಿತ ಚರ್ಚೆಗಳಲ್ಲಿ ಭಾಗವಹಿಸಲ್ಲ ಎಂದ ಕಾಂಗ್ರೆಸ್​

Share This Article

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…

ಹಾಗಲಕಾಯಿಯಲ್ಲಿನ ಕಹಿ ತೆಗೆಯುವುದೇಗೆ ಎಂದು ಆಲೋಚಿಸುತ್ತಿದ್ದೀರಾ; ನಿಮಗಾಗಿ ಈ ಸಿಂಪಲ್​ ಟ್ರಿಕ್ಸ್​ ​ | Health Tips

ಚಳಿಗಾಲದಲ್ಲಿ ಮಂಜಿನಿಂದಾಗಿ ಸೂರ್ಯನ ಬೆಳಕು ಕಡಿಮೆ ಇರುತ್ತದೆ. ಇದರಿಂದ ಜನರು ಹಾಗಲಕಾಯಿಯ ರುಚಿ ನೋಡುವುದಿಲ್ಲ. ಏಕೆಂದರೆ…