More

    ಮೊದಲ ಹಂತದ ಮತದಾನ; ಪಶ್ಚಿಮ ಬಂಗಾಳ, ಛತ್ತೀಸ್​ಗಢ, ಮಣಿಪುರದಲ್ಲಿ ಹಿಂಸಾಚಾರ

    ನವದೆಹಲಿ: 543 ಲೋಕಸಭೆ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಇಂದು (ಏಪ್ರಿಲ್ 19) ಮೊದಲ ಹಂತದ ಮತದಾನ ನಡೆಯುತ್ತಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 10 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಎಲ್ಲಾ ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಚುನಾವಣಾ ಆಯೋಗ ಶಾಂತಿಯುತ ಮತದಾನ ನಡೆಸಲು ಮುಂಜಾಗ್ರತಾ ಕ್ರಮ ಕೈಗೊಂಡರೂ ದುಷ್ಕರ್ಮಿಗಳು ಅಶಾಂತಿ ಸೃಷ್ಟಿಸಿದ್ದಾರೆ.

    ಪಶ್ಚಿಮ ಬಂಗಾಳ, ಮಣಿಪುರ ಹಾಗೂ ಛತ್ತೀಸ್​ಗಢದಲ್ಲಿ ದುಷ್ಕರ್ಮಿಗಳ ಗುಂಪು ಮತಗಟ್ಟೆಗಳನ್ನು ಗುರಿಯಾಗಿಸಿಕೊಂಡು ಬಾಂಬ್​ ಹಾಗೂ ಕಲ್ಲು ತೂರಾಟ ನಡೆಸಿದ್ದು, ಭದ್ರತಾ ಪಡೆಗಳು ಆಶ್ರವಾಯು ಪ್ರಯೋಗಿಸುವ ಮೂಲಕ ಗುಂಪನ್ನು ಚದುರಿಸಿದ್ದಾರೆ.

    ಜನಾಂಗೀಯ ಘರ್ಷಣೆಗೆ ತುತ್ತಾಗಿ ವಿಶ್ವದಾದ್ಯಂತ ಸದ್ದು ಮಾಡಿದ್ದ ಮಣಿಪುರದ ಇಂಫಾಲ್​ನಲ್ಲಿ ಇಂದು ಮತ್ತೆ ಹಿಂಸಾಚಾರ ಸಂಭವಿಸಿದೆ. ಮತದಾನ ನಡೆಯುವ ವೇಳೆ ಪೂರ್ವ ಇಂಫಾಲ್‌ನ ಮತಗಟ್ಟೆಯೊಂದರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ರಕ್ಷಣಾ ಪಡೆಗಳು ತಿರುಗೇಟು ನೀಡಿದ್ದಾವೆ.

    ಇದನ್ನೂ ಓದಿ: ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು

    ಪಶ್ಚಿಮ ಬಂಗಾಳದ ಕೂಚ್​ ಬೆಹಾರ್​ ಲೋಕಸಭೆ ಕ್ಷೇತ್ರದ ಚಂದ್ಮರಿ, ದಿನ್‌ಹಟಾ ಸೇರಿದಂತೆ ದುಷ್ಕರ್ಮಿಗಳು ಕೆಲಕಡೆ ಕಲ್ಲು ತೂರಾಟ ನಡೆಸಿದ್ದು,  ಭಾಗದ ಬಿಜೆಪಿ ಬೂತ್ ಅಧ್ಯಕ್ಷರ ಮನೆ ಮೇಲೆ ತೃಣಮೂಲ ಕಾರ್ಯಕರ್ತರು ಬಾಂಬ್ ಎಸೆದಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಇದರ ಜೊತೆಗೆ ಪೋಲಿಂಗ್ ಏಜೆಂಟ್ ಬಿಸ್ವನಾಥ್ ಪಾಲ್​ರನ್ನು ಟಿಎಂಸಿ ಕಾರ್ಯಕರ್ತರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ಛತ್ತೀಸ್‌ಗಢದಲ್ಲಿ, ಬಿಜಾಪುರದ ಗಲ್ಗಾಮ್ ಪ್ರದೇಶದ ಮತಗಟ್ಟೆಯಿಂದ 500 ಮೀಟರ್ ದೂರದಲ್ಲಿರುವ ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವಾಗ ಬರೇಲ್ ಗ್ರೆನೇಡ್ ಲಾಂಚರ್ ಸೆಲ್ (UBGL) ಸ್ಫೋಟಗೊಂಡಿದೆ.  ವೇಳೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts