More

    ದೌರ್ಜನ್ಯ ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲ

    ಮಸ್ಕಿ: ಮದ್ಲಾಪೂರು ಗ್ರಾಮದ ದಲಿತ ಮುಖಂಡ ಪ್ರಸಾದ್ ಅವರನ್ನು ಭೀಕರವಾಗಿ ಕೊಲೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಪ್ರಸಾದ್ ಕುಟುಂಬದವರಿಗೆ ಜಮೀನು, ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿ ತಾಲೂಕು ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

    ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಮೇಲಿನ ದೌರ್ಜನ್ಯ ಸಲ್ಲ

    ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಗುರುವಾರ ಸಂಚಾರ ತಡೆದು ಪ್ರತಿಭಟನೆ ನಡೆಸಿ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಸಿಲ್ ಕಚೇರಿ ಶಿರಸ್ತೇದಾರ್ ಸೈಯದ್ ಅಖ್ತರ್ ಅಲಿಗೆ ಸಲ್ಲಿಸಿದರು. ಜಿಲ್ಲೆಯಲ್ಲಿ ಮಾದಿಗ ಸಮುದಾಯದವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಕ್ರಮ ವಹಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.

    ಸರ್ಕಾರದ ನಿಯಮಗಳ ಪ್ರಕಾರ ಪ್ರತಿ ತಿಂಗಳಿಗೊಮ್ಮೆ ದಲಿತ ಕೇರಿಗಳಲ್ಲಿ ಸಂಬಂದಪಟ್ಟ ಪೊಲೀಸ್ ಠಾಣೆಗಳಿಂದ ಶಾಂತಿಸಭೆ ನಡೆಸಬೇಕು. ಆದರೆ ಮದ್ಲಾಪೂರದಲ್ಲಿ ನೆಪಕ್ಕೆ ಶಾಂತಿ ಸಭೆ ನಡೆಸಿ ಸರ್ಕಾರಕ್ಕೆ ನಕಲಿ ವರದಿ ಸಲ್ಲಿಸಲಾಗಿದೆ. ಪ್ರಸಾದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

    ಪ್ರಸಾದ್ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಬೇಕು. ಜೀವನ ನಿರ್ವಹಣೆಗೆ ಜಮೀನು ಹಾಗೂ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು. ಪ್ರಮುಖರಾದ ಭೀಮರಾಯ ಬಳಗಾನೂರು, ಬಸವರಾಜ್ ಉದ್ಬಾಳ, ಮರಿಸ್ವಾಮಿ ಬೆಕನಾಳ, ಕಿರಣ ಮುರಾರಿ, ಜಯಪ್ಪ ಮೆದಕಿನಾಳ, ಮಲ್ಲಯ್ಯ ಮುರಾರಿ. ಆಂಜನೇಯ, ಮುರಾರಿ, ಜಮದಗ್ನಿ, ಗಂಗಾಧರ ಮುರಾರಿ, ಸಂತೋಷ ಹಿರೇದಿನ್ನಿ, ಮಲ್ಲಿಕ್ ಮುರಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts