More

    ಮಣಿಪುರದಲ್ಲಿ ಹಿಂಸಾಚಾರ, ಮಹಿಳಾ ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳಿ

    ಕೊಪ್ಪಳ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಮಹಿಳಾ ದೌರ್ಜನ್ಯ ತಡೆಗೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಅಶೋಕ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

    ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಳೆದ ಎರಡೂವರೆ ತಿಂಗಳಿಂದ ಹಿಂಸಾಚಾರ ನಡೆಯುತ್ತಿದ್ದು, 200ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 6 ಸಾವಿರಕ್ಕೂ ಹೆಚ್ಚು ತಮ್ಮ ಪ್ರಾಣ ರಕ್ಷಣೆಗಾಗಿ ವಲಸೆ ಹೋಗಿದ್ದಾರೆ. ರಸ್ತೆಗಳ ಮೇಲೆ, ಕಾಡುಗಳಲ್ಲಿ ಜೀವನ ಕಳೆಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯ ಮಹಿಳೆಯರ ಮೇಲೆ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.

    ಓರ್ವ ಮಹಿಳೆಗೆ ಗುಂಡಿಟ್ಟು ಕೊಲ್ಲಲಾಗಿದೆ. ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿರುವುದು ಇಡೀ ದೇಶವೇ ತಲೆತಗ್ಗಿಸುವಂಥದ್ದು. ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಲ್ಲಿನ ರಾಜ್ಯ ಸರ್ಕಾರ ಜನರ ಜೀವ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೂಡಲೇ ಮಣಿಪುರ ಸರ್ಕಾರ ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸಬಿಯಾ ಪಟೇಲ್, ಜಮಾತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಹುಮೆರಾ ಫಾರೂಕ್, ಪ್ರಮುಖರಾದ ನಾಸಿರ್ ನಾಸಿರಳೆಕೋಪ, ರಿಜ್ವಾನಾ ಹೈದರ್, ಸಲಿಮಾ ಜಾಹ್, ಇಸಾಕ್ ಪ್ಯೂಜೈಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts