21.7 C
Bengaluru
Tuesday, January 21, 2020

ವಿರಾಜಪೇಟೆ ವ್ಯಾಪ್ತಿಯಲ್ಲೂ ಭರ್ಜರಿ ಮಳೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ವಿರಾಜಪೇಟೆ: ಪಟ್ಟಣ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗಿನಿಂದ ಶನಿವಾರ ಬೆಳಗಿನ 8 ಗಂಟೆವರೆಗೆ 83.3 ಮಿ.ಮೀ. ಮಳೆ ಸುರಿದಿದೆ.
ಈ ವ್ಯಾಪ್ತಿಯಲ್ಲಿ ಮಳೆ ಚುರುಕುಗೊಂಡಿದ್ದು, ನದಿಗಳಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ.
ವೀರಾಜಪೇಟೆ ಬಳಿಯ ಆರ್ಜಿ, ಪೆರುಂಬಾಡಿ, ಬಾಳುಗೋಡು, ಬಿಟ್ಟಂಗಾಲ, ಕೆದಮುಳ್ಳೂರು, ಕದನೂರು ಸೇರಿದಂತೆ ವಿವಿಧೆಡೆಗಳಲ್ಲಿಯೂ ನಿರಂತರ ಮಳೆ ಸುರಿಯುತ್ತಿದೆ. ಬೇತ್ರಿಯ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಕೃಷಿ ಚಟುವಟಿಕೆಗೆ ಪೂರಕವಾದ ಮಳೆ ಬೀಳುತ್ತಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಬೀರಿದೆ.
ಕೊಡಗು-ಕೇರಳ ಗಡಿ ಪ್ರದೇಶವಾದ ಮಾಕುಟ್ಟದ ಗಡಿಯಲ್ಲಿಯೂ ಮಳೆ ಚುರುಕಾಗಿದ್ದು, ಮಾಕುಟ್ಟದಲ್ಲಿ ರಾಜ್ಯ ಹೆದ್ದಾರಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದರಿಂದ ಈ ಮಳೆಯಿಂದ ಭಾರಿ ವಾಹನಗಳ ಸಂಚಾರಕ್ಕೆ ಯಾವುದೇ ಅಡಚಣೆಯಾಗಿಲ್ಲ.
ವಿರಾಜಪೇಟೆ ವ್ಯಾಪ್ತಿಯಲ್ಲಿ ಶನಿವಾರ ಬೆಳಗಿನಿಂದಲೇ ಬಿಡುವಿಲ್ಲದ ಮಳೆ ಸುರಿಯುತ್ತಿದ್ದು, ಪಟ್ಟಣದ ಅರಸು ನಗರ, ಅಯ್ಯಪ್ಪಬೆಟ್ಟ, ಮಲೆತಿರಿಕೆ ಬೆಟ್ಟ, ನೆಹರುನಗರದಲ್ಲೂ ನಿರಂತರ ಮಳೆಯಾಗುತ್ತಿದೆ.

ನಾಪೋಕ್ಲು: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗುರುವಾರದಿಂದ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರವೂ ಗುಡುಗು ಸಹಿತ ಮಳೆ ಸುರಿಯಿತು.
ಮಳೆಯಿಂದಾಗಿ ಅಲ್ಲಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಗೆ ಅಪಾಯ ಉಂಟಾಗುತ್ತಿದೆ. ಸಮೀಪದ ದೊಡ್ಡ ಪುಲಿಕೋಟು ಗ್ರಾಮದಲ್ಲಿ ಕಳೆದ ವರ್ಷ ರಸ್ತೆಗೆ ನಿರ್ಮಿಸಿದ್ದ ತಡೆಗೋಡೆಯ ಮಣ್ಣು ಕುಸಿಯುತ್ತಿದ್ದು ಅಪಾಯ ಎದುರಾಗಿದೆ. ಈ ಹಿಂದೆ ಮಳೆ ಹೆಚ್ಚಿದಾಗ ಹೊಳೆಯ ನೀರು ಸೇತುವೆ ಮೇಲೆ ಉಕ್ಕಿ ಹರಿಯುತ್ತಿತ್ತು. ಪರಿಣಾಮ ರಸ್ತೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದೀಗ ತಡೆಗೋಡೆ ಕುಸಿಯುತ್ತಿರುವ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಗ್ರಾಮಸ್ಥ ಮಣವಟ್ಟೀರ ದಯಾಚಿಣ್ಣಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಶ್ರೀಮಂಗಲ: ದಕ್ಷಿಣ ಕೊಡಗಿನ ಬಿರುನಾಣಿ, ಹುದಿಕೇರಿ, ಟಿ.ಶೆಟ್ಟಿಗೇರಿ ವ್ಯಾಪ್ತಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮಧ್ಯೆ ಮಧ್ಯೆ ಬಿಡುವು ನೀಡಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಶುಕ್ರವಾರ ರಾತ್ರಿ ಈ ವ್ಯಾಪ್ತಿಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಶನಿವಾರ ಸಂಜೆಯವರೆಗೂ ಮಳೆ ಮುಂದುವರಿದಿದೆ. ಬಿರುನಾಣಿ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ 5.20 ಇಂಚು (130 ಮಿ.ಮೀ) ಮಳೆಯಾಗಿದೆ.
ಟಿ.ಶೆಟ್ಟಿಗೇರಿ ವ್ಯಾಪ್ತಿಗೆ 4.42 ಇಂಚು (110 ಮಿ.ಮೀ) ಮಳೆಯಾಗಿದೆ. ಶುಕ್ರವಾರ ರಾತ್ರಿ ಭಾರಿ ಗುಡುಗು ಸಹಿತ ಮಳೆ ಸುರಿದಿದೆ. ಶ್ರೀಮಂಗಲ, ಟಿ.ಶೆಟ್ಟಿಗೇರಿ, ಬಿರುನಾಣಿ, ಹುದಿಕೇರಿ ವ್ಯಾಪ್ತಿಯಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಸೇವೆ ಕಡಿತವಾಗಿ ಗ್ರಾಹಕರಿಗೆ ತೀವ್ರ ತೊಂದರೆಯುಂಟಾಗಿತ್ತು. ಶನಿವಾರ ಬೆಳಗ್ಗೆ 10 ಗಂಟೆಯ ನಂತರ ದೂರವಾಣಿ ಸೇವೆ ದುರಸ್ತಿಪಡಿಸಲಾಗಿದೆ.
ಈ ವ್ಯಾಪ್ತಿಯ ಲಕ್ಷ್ಮಣತೀರ್ಥ ಮತ್ತು ಕಕ್ಕಟ್ಟ್‌ಪೊಳೆ ನದಿಯ ನೀರಿನ ಹರಿವಿನ ಮಟ್ಟ ಹೆಚ್ಚಾಗಿದೆ. ಪೊನ್ನಂಪೇಟೆ, ಕಾನೂರು, ಹರಿಹರ, ಕುಟ್ಟ ವ್ಯಾಪ್ತಿಯಲ್ಲಿಯೂ ಶುಕ್ರವಾರ ಉತ್ತಮ ಮಳೆಯಾಗಿದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...