

ತ್ರಿಶೂರ್: ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರ ಹಾವಳಿ ಹೆಚ್ಚಾಗಿದ್ದು, ಸರ್ಕಾರಗಳು ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸದು ಸೈಬರ್ ಕಳ್ಳರು ಮಾತ್ರ ಅಮಾಯಕರನ್ನು ವಂಚಿಸುತ್ತಲೇ ಬರುತ್ತಿದ್ದಾರೆ. ಇದೀಗ ಅಂತಹದ್ದೆ ಘಟನೆಯೊಂದರಲ್ಲಿ ಸೈಬರ್ ಖದೀಮನೊಬ್ಬ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಪೊಲೀಸ್ ಅಧಿಕಾರಿಯ ವೇಷದಲ್ಲಿರುವ ಸೈಬರ್ ಖದೀಮನೋರ್ವ ನಿಜವಾದ ಆಫೀಸರ್ ಜೊತೆಗೆ ವಿಡಿಯೋ ಕಾಲ್ ಮುಖಾಂತರ ಮಾತುಕತೆ ನಡೆಸಿದ್ದು, ಬಳಿಕ ನಿಜವಾದ ಅಧಿಕಾರಿ ಕ್ಯಾಮರಾ ಆನ್ ಮಾಡಿದಾಗ ಸೈಬರ್ ಖದೀಮ ಒಂದು ಕ್ಷಣ ಶಾಕ್ ಆಗಿದ್ದು, ಅಧಿಕಾರಿ ಕಾಲ್ ರೆಕಾರ್ಡ್ ಹಾಗೂ ಡೀಟೇಲ್ಸ್ ಎಲ್ಲಾ ತೆಗೆಸಿರುವುದಾಗಿ ಹೇಳಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.
ಇತ್ತ ಪೊಲೀಸ್ ಅಧಿಕಾರಿಯ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕರು ಪೊಲೀಸ್ ಅಧಿಕಾರಿಯನ್ನು ಹಾಡಿಹೊಗಳುತ್ತಿದ್ದಾರೆ. ಹಲವರು ಈ ವಿಡಿಯೋವನ್ನು ಪೋಸ್ಟ್ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಕ್ಕೆ ಅಭಿನಂದನೆಗಳನ್ನು ತಿಳಿಸಿದ್ದು, ಪೊಲೀಸರು ವಿಡಿಯೋ ಕಾಲ್ಗೆ ಸಂಬಂಧಿಸಿದಂತೆ ಕ್ರಮ ಜರುಗಿಸಿದರಾ ಇಲ್ಲವಾ ಎಂಬುದು ಈವರೆಗೆ ತಿಳಿದು ಬಂದಿಲ್ಲ.