

ನವದೆಹಲಿ: ಐಪಿಎಲ್ ಟೂರ್ನಿ ಸ್ಥಗಿತಗೊಂಡ ಬಳಿಕ ಮನೆಗೆ ಮರಳಿರುವ ಮುಂಬೈ ಇಂಡಿಯನ್ಸ್ ಹಾಗೂ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಿಸಿ ಏರಿಸಿದ್ದಾರೆ. ಇದಕ್ಕೆ ಕಾರಣವಾಗಿರುವುದು ಹಾರ್ದಿಕ್ ಪಾಂಡ್ಯ ಹಾಗೂ ಅವರ ಪತ್ನಿ-ರೂಪದರ್ಶಿ ನತಾಶಾ ಸ್ಟಾಂಕೋವಿಕ್ ಅವರ ರೋಮ್ಯಾಂಟಿಕ್ ಚಿತ್ರಗಳು!
ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಜತೆಯಾಗಿ ಪೋಸ್ ನೀಡಿರುವ ವಿವಿಧ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಾರ್ದಿಕ್ ಪಾಂಡ್ಯ ಇನ್ಸ್ಟಾಗ್ರಾಂನಲ್ಲಿ ಹಾಕಿರುವ ಈ ಪೋಸ್ಟ್ಗೆ ಇದುವರೆಗೆ 18 ಲಕ್ಷ ಲೈಕ್ಸ್ಗಳು ಲಭಿಸಿವೆ.
ಹಾರ್ದಿಕ್-ನತಾಶಾ 2020ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ವರ್ಷಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಹಾರ್ದಿಕ್ ಬಳಿಕ ಏಪ್ರಿಲ್ನಲ್ಲಿ ಲಾಕ್ಡೌನ್ ಸಮಯದಲ್ಲಿ ತಂದೆಯಾಗುತ್ತಿರುವ ವಿಷಯವನ್ನು ಬಹಿರಂಗಪಡಿಸಿದ್ದರು. ಹಾರ್ದಿಕ್-ನತಾಶಾ ದಂಪತಿಗೆ ಕಳೆದ ವರ್ಷ ಜುಲೈನಲ್ಲಿ ಪುತ್ರ ಅಗಸ್ತ್ಯ ಜನಿಸಿದ್ದ.