More

    ಹಿರಿಯ ಅಭಿಮಾನಿ ಜತೆ ಪೋಸ್​ ನೀಡಿದ ಎಂ.ಎಸ್. ಧೋನಿ; ವಿಡಿಯೋ ವೈರಲ್

    ಚೆನ್ನೈ: 17ನೇ ಆವೃತ್ತಿಯ ಐಪಿಎಲ್​ಗೆ ದಿನಗಣನೆ ಆರಂಭವಾಗಿದ್ದು, ಅಭಿಮಾನಿಗಳು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಉದ್ಘಾಟನಾ ಪಂದ್ಯವನ್ನು ವೀಕ್ಷಿಸಲು ಎದುರು ನೋಡುತ್ತಿದ್ದಾರೆ. ಹೀಗಾಗಿ ಮುಂಬರುವ ಟೂರ್ನಿಗೆ ಈಗಾಗಲೆ ಅಭ್ಯಾಸ ಆರಂಭಿಸಿರುವ ಚೆನ್ನೈ ಸೂಪರ್​ ಕಿಂಗ್ಸ್​ ತವರು ಮೈದಾನ ಚೆಪಾಕ್​ ಸ್ಟೇಡಿಯಂನಲ್ಲಿ ವಿಶೇಷ ಶಿಬಿರ ಆಯೋಜಿಸಿದೆ.

    ಈಗಾಗಲೇ ತಂಡವನ್ನು ಕೂಡಿಕೊಂಡಿರುವ ಎಂ.ಎಸ್. ಧೋನಿ ಅಭ್ಯಾಸ ಆರಂಭಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಖತ್​ ಸದ್ದು ಮಾಡುತ್ತಿವೆ. ಇದೀಗ ಕ್ಯಾಪ್ಟನ್​ ಕೂಲ್​ ಎಂ.ಎಸ್. ಧೋನಿ ಮತ್ತೊಂದು ವಿಚಾರಕ್ಕೆ ಎಲ್ಲರ ಗಮನ ಸೆಳೆದಿದ್ದು, ವ್ಯಾಪಕ ಮೆಚ್ಚುಗೆಗೆ ಗುರಿಯಾಗಿದೆ.

    ಇದನ್ನೂ ಓದಿ: ರಂಜಾನ್​ ಪ್ರಯುಕ್ತ ಉಚಿತ ಹಲೀಮ್​ ವಿತರಣೆ; ತಿನ್ನಲು ಹೊರಟವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

    ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ತಮ್ಮ ಸಭ್ಯ ವರ್ತನೆಯಿಂದಲೇ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಮಕ್ಕಳಿಂದ ಹಿಡಿದು ವೃದ್ದರವರೆಗೂ ಧೋನಿ ಅಭಿಮಾನಿಗಳನ್ನು ಹೊಂದಿದ್ದಾರೆ. ಅದಕ್ಕೆ ಪೂರಕವೆಂಬಂತೆ ಚೆಪಾಕ್​ ಅಂಗಳದಲ್ಲಿ ಜಾಹೀರಾತು ಚಿತ್ರೀಕರಣದ ವೇಳೆ ಧೋನಿ ಚೆನ್ನೈ ತಂಡದ ಅಭಿಮಾನಿ ಒಬ್ಬರ ಬಳಿ ತೆರಳಿ ಸ್ಟ್ಯಾಂಡ್​ನಲ್ಲಿ ಫೋಟೋ ತೆಗೆಸಿಕೊಂಡಿರುವುದು ಎಲ್ಲರ ಮೆಚ್ಚುಗೆಗೆ ಗುರಿಯಾಗಿದೆ.

    17ನೇ ಆವೃತ್ತಿಯ ಐಪಿಎಲ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಲೀಗ್‌ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಹಾಲಿ ಚಾಂಪಿಯನ್ ಚೆನ್ನೈ ಹಾಗೂ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಮುಖಾಮುಖಿಯಾಗಲಿದ್ದು, ಕ್ರೀಡಾಭಿಮಾನಿಗಳು ಈ ಪಂದ್ಯ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts