ನವದೆಹಲಿ: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ನಿಟ್ಟಿನಲ್ಲಿ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಪೇಚಿಗೆ ಸಿಲುಕುತ್ತಾರೆ. ಇದೀಗ ಅದೇ ರೀತಿಯ ಘಟನೆಯೊಂದು ನಡೆದಿದ್ದು, ರೀಲ್ಸ್ ಮಾಡಲು ಹೋಗಿ ಯುವಕರು ರಿಯಲ್ ಆಗಿ ಧರ್ಮಡೇಟು ತಿಂದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯು ಪಾಕಿಸ್ತಾನದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ, ಯುವಕರ ಗುಂಪೊಂದು ಹಳಿ ಮೇಲೆ ಹಾದು ಹೋಗುವ ತೊರೆಗೆ ಅಡ್ಡಲಾಗಿ ಬೈಕ್ ನಿಲ್ಲಿಸಿ ವೇಗವಾಗಿ ಬರುವ ರೈಲಿಗೆ ನೀರನ್ನು ಹಾರಿಸುವುದನ್ನು ನೋಡಬಹುದಾಗಿದೆ. ಟ್ರೈನ್ ನಿಲ್ಲಿಸುವುದಿಲ್ಲ ಎಂದು ಭಾವಿಸಿ ಯುವಕರ ಗುಂಪು ಈ ರೀತಿ ಮಾಡಿದ್ದು, ಆಶ್ಚರ್ಯ ಎಂಬಂತೆ ರೈಲನ್ನು ನಿಲ್ಲಿಸಲಾಗುತ್ತದೆ.
ಇದನ್ನೂ ಓದಿ: ನಾ ಕಂಡಂತೆ ರೋಹಿತ್ ವಿರಾಟ್ನಂತಲ್ಲಾ; ಟೀಮ್ ಇಂಡಿಯಾ ನಾಯಕನ ಕುರಿತು ಬೋಲ್ಡ್ ಹೇಳಿಕೆ ಕೊಟ್ಟ ಕಪಿಲ್ ದೇವ್
ಕೂಡಲೇ ರೈಲಿನಲ್ಲಿದ್ದ ಪೊಲೀಸರು ಕೆಳಗಿಳಿದು ಬೈಕ್ಅನ್ನು ವಶಕ್ಕೆ ಪಡೆದಿದ್ದು, ಪ್ರಯಾಣಿಕರು ಯುವಕರನ್ನು ಥಳಿಸುತ್ತಿರುವುದನ್ನು ನೋಡಬಹುದಾಗಿದೆ. ಪ್ರಯಾಣಿಕರಿಂದ ತಪ್ಪಿಸಿಕೊಂಡ ಯುವಕರನ್ನು ಅಟ್ಟಾಡಿಸಿಕೊಂಡು ಹೋಗಿ ಹೊಡೆಯುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈವರೆಗೆ 2.5 ಲಕ್ಷಕ್ಕೂ ಹೆಚ್ಚಿನ ವೀವ್ಸ್ ಪಡೆದಿದೆ.
ಕಳೆದ ಕೆಲ ತಿಂಗಳಿನಿಂದ ಈ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರು ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಬಗ್ಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.