Viral Video | ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್​ ಮಾಡಿದ್ದ ಶಿಕ್ಷಕನಿಗೆ ಬಿತ್ತು ಧರ್ಮದೇಟು

Untitled design - 2024-12-01T191140.080
Published on

ಲಖನೌ: ಶಾಲಾ ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡಿ ಸಮಾಜದಲ್ಲಿ ಸುಧಾರಣೆ ತರಲು ತಯಾರು ಮಾಡುತ್ತಾರೆ. ಆದರೆ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಇದಕ್ಕೆ ತದ್ವಿರುದ್ದವಾಗಿ ನಡೆದುಕೊಂಡು ಸಿಕ್ಕಿಬಿದ್ದರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಆ ಶಿಕ್ಷಕನಿಗೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ (Viral Video) ಆಗುತ್ತಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಶಿಕ್ಷಕರನ್ನು ಥಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ವೈರಲ್ ವಿಡಿಯೋದಲ್ಲಿ ವಿದ್ಯಾರ್ಥಿಯು ಶಿಕ್ಷಕರಿಗೆ ಚಪ್ಪಲಿಯಿಂದ ಹೊಡೆಯುತ್ತಿರುವುದನ್ನು ಕಾಣಬಹುದು. ಅವರ ಕುಟುಂಬ ಸದಸ್ಯರು ಸಹ ಶಿಕ್ಷಕರಿಗೆ ಶೂನಿಂದ ಥಳಿಸುವುದನ್ನು ನೋಡಬಹುದು. ವಾಸ್ತವವಾಗಿ ಸರ್ಕಾರಿ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಮುಕೇಶ್ ಚೌರಾಸಿಯಾ ಎಂಬ ಶಿಕ್ಷಕ ತರಗತಿ ವಿದ್ಯಾರ್ಥಿನಿಯರಿಗೆ ಪ್ರತಿದಿನ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಅಲ್ಲದೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದಾಗ ಅವರಿಗೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ವರದಿಯಾಗಿದೆ.

ಆತನ ವರ್ತನೆಯ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಕುಟುಂಬಸ್ಥರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಥಳಿಸಿದ್ದಾರೆ. ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಮತ್ತು ವಿದ್ಯಾರ್ಥಿನಿಯೊಬ್ಬಳು ಶಿಕ್ಷಕರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಶಿಕ್ಷಕನ ವಿರುದ್ಧ ಕುಟುಂಬ ಸದಸ್ಯರು ಎಫ್‌ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ.

ವೈರಲ್​ ವಿಡಿಯೋವನ್ನು ಇದುವರೆಗೂ 10 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದು, ಅನೇಕರು ಪ್ರತಿಕ್ರಿಯಿಸಿದ್ದಾರೆ. ಕೆಲವೊಮ್ಮೆ ಕೆಟ್ಟ ಶಿಕ್ಷಕರಿಗೆ ಸರಿಯಾದ ಪಾಠವನ್ನು ಕಲಿಸಬೇಕಾಗುತ್ತದೆ, ಶಿಕ್ಷಕರನ್ನು ಸರಿಯಾಗಿ ರಿಪೇರಿ ಮಾಡುವುದು ಕುಟುಂಬದ ಜವಾಬ್ದಾರಿ, ಇದು ನಿಜವಾಗಿದ್ದರೆ ಕುಟುಂಬವು ಈ ಕೆಟ್ಟ ವಿಷಯವನ್ನು ಹೇಗೆ ಸಹಿಸಿಕೊಳ್ಳುತ್ತದೆ, ತುಂಬಾ ಒಳ್ಳೆಯ ಕೆಲಸ ಎಂದು ಕಾಮೆಂಟ್​ ಮಾಡಿದ್ದಾರೆ. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net