

ಸೆಂಚುರಿಯನ್: ಟೀಂ ಇಂಡಿಯಾದ ಮಾಜಿ ನಾಯಕ, ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿಗೆ 2023 ವಿಶೇಷ ಎಂದೇ ಹೇಳಬಹುದಾಗಿದೆ. ಈಗಾಗಲೇ ಏಕದಿನ ವಿಶ್ವಕಪ್ ಸೇರಿದಂತೆ ಹಲವು ಪಂದ್ಯಗಳಲ್ಲಿ ದಾಖಲೆ ಬರೆದಿರುವ ಕಿಂಗ್ ಕೊಹ್ಲಿ ಈಗ ಮತ್ತೊಂದು ವಿಶ್ವದಾಖಲೆ ಬರೆಯುವ ಸನಿಹದಲ್ಲಿದ್ದಾರೆ.
ಡಿಸೆಂಬರ್ 26ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಶುರುವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ 66 ರನ್ಗಳನ್ನು ಬಾರಿಸಿದರೆ ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಒಂದನ್ನು ಬರೆಯಲಿದ್ದಾರೆ. ಒಂದು ವೇಳೆ ಹಾಗೆ ಆಗಿದ್ದಲ್ಲಿ ವರ್ಷವೊಂದರಲ್ಲಿ ಅತಿ ಹೆಚ್ಚು ಬಾರಿ 2 ಸಾವಿರ ರನ್ ಕಲೆಹಾಕಿದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.
ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕರ ವರ್ಷ ಒಂದರಲ್ಲಿ 6 ಬಾರಿ 2 ಸಾವಿರ ರನ್ ಕಲೆಹಾಕಿದ್ದರು. ಇತ್ತ ವಿರಾಟ್ ಕೊಹ್ಲಿ ಕೂಡ ಆರು ಬಾರಿ ಈ ಸಾಧನೆ ಮಾಡುವ ಮೂಲಕ ಸಂಗಾಕ್ಕರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದರು. 2023ರಲ್ಲಿ 34 ಇನ್ನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 1934 ರನ್ಗಳನ್ನು ಕಲೆ ಹಾಕಿದ್ದಾರೆ. ಒಂದು ವೇಳೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ವಿರಾಟ್ 66 ರನ್ಗಳಿಸಿದರೆ ಕುಮಾರ್ ಸಂಗಕ್ಕರ ಅವರ ಹೆಸರಿನಲ್ಲಿರುವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.
ಒಂದು ವೇಳೆ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 66 ರನ್ಗಳಿಸಿದರೆ ಕುಮಾರ್ ಸಂಗಕ್ಕರ ಅವರಲ್ಲದೆ ವಿಶ್ವದಾಖಲೆಯನ್ನು ಬರೆಯಲಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 66+ ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಎಂದು ಕಾದು ನೋಡಬೇಕಿದೆ.