More

    ಸೋಲಿನ ನಡುವೆಯೂ ದಿಗ್ಗಜರ ದಾಖಲೆ ಮುರಿದ ವಿರಾಟ್​ ಕೊಹ್ಲಿ

    ಬೆಂಗಳೂರು: ಮಾರ್ಚ್​ 29ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ ಪಂದ್ಯದಲ್ಲಿ ಕಲ್ಕತ್ತಾ ನೈಟ್​ರೈಡರ್ಸ್​ ತಂಡವು ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕೆಕೆಆರ್ 17ನೇ ಓವರ್​ನಲ್ಲಿಯೇ ಗುರಿ ಮುಟ್ಟಿತು. ಈ ಮೂಲಕ ಆರ್​ಸಿಬಿ ತವರಿನಲ್ಲಿ ಕೆಕೆಆರ್ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. 

    ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 83 ರನ್ ಕಲೆಹಾಕಿದರು. ಈ ಪಂದ್ಯದಲ್ಲಿ ಭರ್ಜರಿ 4 ಸಿಕ್ಸರ್ ಸಿಡಿಸಿದ ವಿರಾಟ್ ಕೊಹ್ಲಿ ಕೆಕೆಆರ್​ ವಿರುದ್ಧದ ಸೋಲಿನ ನಡುವೆಯೂ ಆರ್​ಸಿಬಿ ಪರ ದಾಖಲೆಯೊಂದನ್ನು ಬರೆದಿದ್ದಾರೆ.

    ತವರು ಕ್ರೀಡಾಂಗಣ ಚಿನ್ನಸ್ವಾಮಿಯಲ್ಲಿ ಕಲ್ಕತ್ತಾ ನೈಟ್​ರೈಡರ್ಸ್​ ಸವಾಲು ಸ್ವೀಕರಿಸಿದ ಆರ್​ಸಿಬಿ ಪರ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 83 ರನ್ ಕಲೆಹಾಕಿದರು. ಈ ಪಂದ್ಯದಲ್ಲಿ ಭರ್ಜರಿ 4 ಸಿಕ್ಸರ್ ಸಿಡಿಸಿದ ವಿರಾಟ್ ಕೊಹ್ಲಿ ಆರ್​ಸಿಬಿ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಎಂಬ ದಾಖಲೆ ಕೂಡ ಬರೆದರು.

    Virat Kohli

    ಇದನ್ನೂ ಓದಿ: ರಾಜಸ್ಥಾನ ವಿರುದ್ಧ ಸೋತರೂ ಡೆಲ್ಲಿ ಕ್ಯಾಪಿಟಲ್ಸ್​ ಪರ ವಿಶೇಷ ದಾಖಲೆ ಬರೆದ ರಿಷಭ್​ ಪಂತ್

    ಈ ಪಂದ್ಯದಲ್ಲಿ 4 ಸಿಕ್ಸರ್ ಸಿಡಿಸುವ ಮೂಲಕ ಕೊಹ್ಲಿ ಐಪಿಎಲ್​ನಲ್ಲಿ 241 ಸಿಕ್ಸರ್​ಗಳನ್ನು ಪೂರೈಸಿದರು. ಈ ಮೂಲಕ ಆರ್​ಸಿಬಿ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದ ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್​ ದಾಖಲೆಯನ್ನು ಮುರಿದರು. ಕ್ರಿಸ್ ಗೇಲ್ ಆರ್​ಸಿಬಿ ಪರ 239 ಹಾಗೂ ಎಬಿ ಡಿವಿಲಿಯರ್ಸ್​ 238 ಸಿಕ್ಸರ್​ಗಳನ್ನು ಸಿಡಿಸುವ ಮೂಲಕ ಮೊದಲರೆಡು ಸ್ಥಾನಗಳಲ್ಲಿ ಇದ್ದರು.

    ಇದಲ್ಲದೆ ಕೊಹ್ಲಿ ಐಪಿಎಲ್​ನಲ್ಲಿ ಅಧಿಕ ಸಿಕ್ಸರ್ ಸಿಡಿಸಿದ ಆಟಗಾರರ ಪೈಕಿ ಎಂಎಸ್ ಧೋನಿಯನ್ನು ಹಿಂದಿಕ್ಕಿದ್ದಾರೆ. ಧೋನಿ 252 ಐಪಿಎಲ್ ಪಂದ್ಯಗಳ 218 ಇನ್ನಿಂಗ್ಸ್‌ಗಳಲ್ಲಿ 239 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆದರೆ ವಿರಾಟ್ ಇದುವರೆಗೆ ಐಪಿಎಲ್‌ನ 240 ಪಂದ್ಯಗಳ 232 ಇನ್ನಿಂಗ್ಸ್‌ಗಳಲ್ಲಿ 241 ಸಿಕ್ಸರ್ ಸಿಡಿಸಿದ್ದಾರೆ. ಈ ಮೂಲಕ ವಿರಾಟ್ ಲೀಗ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಐಪಿಎಲ್​ನಲ್ಲಿ ಅಧಿಕ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ 357 ಸಿಕ್ಸರ್ ಸಿಡಿಸಿರುವ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts