More

    ಧೋನಿ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡ ವಿರಾಟ್​ ಕೊಹ್ಲಿ; ಕಾರಣ ಹೀಗಿದೆ

    ನವದೆಹಲಿ: ಕಳೆದ ವರ್ಷ ಐಪಿಎಲ್​, ವಿಶ್ವಕಪ್​ನಲ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ಅನೇಕ ದಾಖಲೆಗಳನ್ನು ಬರೆದಿದ್ದ ವಿರಾಟ್​ ಕೊಹ್ಲಿ ದಾಖಲೆಗಳ ಸರದಾರ ಎಂದೇ ಹೆಸರುವಾಸಿಯಾಗಿದ್ದಾರೆ. ಇದೀಗ ವಿರಾಟ್​ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದು, ಎಂ.ಎಸ್. ಧೋನಿ ದಾಖಲೆಯನ್ನು ವಿಶೇಷವೆನ್ನಿಸಿದೆ.

    ಇತ್ತೀಚಿಗೆ ಅಂತರಾಷ್ಟ್ರೀಯ ಕ್ರಿಕೆಟ್​ ಮಂಡಳಿ (ICC) 2023ನೇ ಸಾಲಿನ ತಂಡಗಳನ್ನು ಹೆಸರಿಸಿದೆ. ಮೂರು ಮಾದರಿಯ ತಂಡದಲ್ಲಿ ಟೀಂ ಇಂಡಿಯಾದ ಆಟಗಾರರು ತಮ್ಮ ಪಾರುಪತ್ಯವನ್ನು ಮುಂದುವರೆಸಿದ್ದು, ಹೆಸರಿಸಲಾಗಿರುವ ಆರು ಆಟಗಾರರ ಪೈಕಿ ವಿರಾಟ್ ಕೊಹ್ಲಿ ಕೂಡ ಒಬ್ಬರಾಗಿದ್ದಾರೆ.

    ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ 24 ಇನಿಂಗ್ಸ್ ಆಡಿದ್ದ ಕಿಂಗ್ ಕೊಹ್ಲಿ 1377 ರನ್ ಕಲೆಹಾಕಿದ್ದರು. ಈ ವೇಳೆ 6 ಭರ್ಜರಿ ಶತಕ ಹಾಗೂ 8 ಅರ್ಧಶತಕಗಳನ್ನು ಬಾರಿಸಿದ್ದರು. ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಕಿಂಗ್ ಕೊಹ್ಲಿ ಐಸಿಸಿ ವರ್ಷದ ಏಕದಿನ ತಂಡದ ಭಾಗವಾಗಿದ್ದಾರೆ. ಇದರೊಂದಿಗೆ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಐಸಿಸಿ ತಂಡದ ಭಾಗವಾದ ಆಟಗಾರ ಎಂಬ ವಿಶ್ವ ದಾಖಲೆಯನ್ನು ವಿರಾಟ್​​ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

    Virat Kohli

    ಇದನ್ನೂ ಓದಿ: ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿದ ರೈತ ಸಂಘಟನೆಗಳು; ಕಾರಣ ಹೀಗಿದೆ

    ಇದಕ್ಕೂ ಮುನ್ನ ಈ ದಾಖಲೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರ ಹೆಸರಿನಲ್ಲಿತ್ತು. 2004 ರಿಂದ 2019 ರವರೆಗೆ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಧೋನಿ ಒಟ್ಟು 13 ಬಾರಿ ಐಸಿಸಿ ತಂಡಗಳ ಭಾಗವಾಗಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ.

    2008ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ ವಿರಾಟ್​ ಕೊಹ್ಲಿ  ಇದುವರೆಗೆ 14 ಬಾರಿ ಐಸಿಸಿ ತಂಡಗಳ ಭಾಗವಾಗಿದ್ದಾರೆ. ಈ ಮೂಲಕ ಐಸಿಸಿ ಟೀಮ್ ಆಫ್ ದಿ ಇಯರ್​ನಲ್ಲಿ ಅತ್ಯಧಿಕ ಬಾರಿ ಕಾಣಿಸಿಕೊಂಡ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಈ ಮೂಲಕ ವಿರಾಟ್​ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts