ನ್ಯೂಜಿಲೆಂಡ್​ ಎದುರು Virat Kohli ಅರ್ಧಶತಕ; ದಿಗ್ಗಜರ ಎಲೈಟ್​ ಲಿಸ್ಟ್​ನಲ್ಲಿ ಸ್ಥಾನ ಪಡೆದ ಕಿಂಗ್​

Virat Kohli
Published on

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ನ್ಯೂಜಿಲೆಂಡ್​ (NewZealand) ನಡುವಿನ ಟೆಸ್ಟ್​ ಸರಣಿಯ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಮ್​ ಇಂಡಿಯಾ (Team India) ಅಲ್ಪ ಚೇತರಿಕೆ ಕಂಡಿದ್ದು, ಮೊದಲ ಇನ್ನಿಂಗ್ಸ್​ನಲ್ಲಿ ಉಂಟಾದ ಲೋಪದೋಷಗಳನ್ನು ಸರಿಪಡಿಸಿಕೊಂಡು ಎರಡನೇ ಇನ್ನಿಂಗ್ಸ್​ನಲ್ಲಿ ಕಮ್​ಬ್ಯಾಕ್​ ಮಾಡಿರುವ ಭಾರತ ತಂಡವು ಪ್ರವಾಸಿಗರಿಗೆ ತಕ್ಕ ತಿರುಗೇಟು ನೀಡಿದೆ.

ಮೊದಲ ಇನ್ನಿಂಗ್ಸ್​ನಲ್ಲಿ ಶೂನ್ಯ ಸುತ್ತಿದ್ದ ವಿರಾಟ್​ ಕೊಹ್ಲಿ (Virat Kohli) ಎರಡನೇ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಗಳಿಸುವ ಮೂಲಕ ಟೀಕಾಕಾರರಿಗೆ ಖಡಕ್​ ತಿರುಗೇಟು ನೀಡಿದ್ದಾರೆ. ಪ್ರವಾಸಿ ನ್ಯೂಜಿಲೆಂಡ್​ (Newzealand) ಎದುರು ಅರ್ಧಶತಕ ಗಳಿಸುವ ಮೂಲಕ ವಿರಾಟ್​ ಕೊಹ್ಲಿ ಸ್ಮರಣೀಯ ಸಾಧನೆ ಮಾಡಿದ್ದು, ಕ್ರಿಕೆಟ್​ ದಿಗ್ಗಜರಾದ ಸಚಿನ್​, ದ್ರಾವಿಡ್​, ತೆಂಡೂಲ್ಕರ್​ ಅವರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಮೊದಲ ಇನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದ್ದ ವಿರಾಟ್ (Virat Kohli), ದ್ವಿತೀಯ ಇನಿಂಗ್ಸ್‌ನಲ್ಲಿ ಸಮಯೋಚಿತವಾಗಿ ಆಡುವ ಮೂಲಕ ಆಕರ್ಷಕ ಅರ್ಧಶತಕ ಗಳಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್‌ಗಳ ಸಾಧನೆಯೊಂದಿಗೆ, ಭಾರತದ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಸುನಿಲ್ ಗವಾಸ್ಕರ್ ಸಾಲಿಗೆ ವಿರಾಟ್ ಕೊಹ್ಲಿ (Virat Kohli) ಸೇರ್ಪಡೆಯಾಗಿದ್ದಾರೆ.

ಅಲ್ಲದೇ ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಸಚಿನ್ ತೆಂಡೂಲ್ಕರ್ 15,921, ರಾಹುಲ್ ದ್ರಾವಿಡ್ 13,265 ಹಾಗೂ ಸುನಿಲ್ ಗವಾಸ್ಕರ್ 10,122 ರನ್ ಗಳಿಸಿದ್ದಾರೆ. ವಿಶ್ವ ಕ್ರಿಕೆಟ್‌ನ ಒಟ್ಟಾರೆ ಪಟ್ಟಿಯಲ್ಲಿ ಸಚಿನ್ ಮುಂಚೂಣಿಯಲ್ಲಿದ್ದಾರೆ.

ಪ್ರಸಕ್ತ ಸಾಲಿನ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್​ ಕೊಹ್ಲಿ (Virat Kohli) ಗಳಿಸಿದ ಮೊದಲ ಅರ್ಧಶತಕ ಇದಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ 46 ಹಾಗೂ ಬಾಂಗ್ಲಾದೇಶ ವಿರುದ್ಧ 47 ರನ್ ಗಳಿಸಿದ್ದರೂ ಅರ್ಧಶತಕ ಗಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಪ್ರಸಕ್ತ ಸಾಲಿನಲ್ಲಿ ವಿರಾಟ್​ ಕೊಹ್ಲಿ (Virat Kohli) ಅರ್ಧಶತಕ ಗಳಿಸುವ ಮೂಲಕ ರನ್​ ಬರವನ್ನು ನೀಗಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net