More

    ಡಬ್ಲ್ಯುಟಿಸಿ ಫೈನಲ್ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಸಿಕ್ತು ಗುಡ್ ನ್ಯೂಸ್…!

    ದುಬೈ: ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಆರಂಭಕ್ಕೆ ಕೇವಲ ಒಂದು ದಿನವಷ್ಟೇ ಬಾಕಿ ಉಳಿದಿದೆ. ಇದರ ನಡುವೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಬುಧವಾರ ಪ್ರಕಟಿಸಲಾದ ಐಸಿಸಿ ಟೆಸ್ಟ್ ರ‌್ಯಾಂಕಿಂಗ್‌ನ ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವನ್ ಸ್ಮಿತ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಶುಕ್ರವಾರದಿಂದ ಸೌಥಾಂಪ್ಟನ್‌ನಲ್ಲಿ ಭಾರತ ತಂಡ ಮುನ್ನಡೆಸಲಿರುವ ಕೊಹ್ಲಿ, 814 ರೇಟಿಂಗ್ ಪಾಯಿಂಟ್ಸ್ ಸಂಗ್ರಹಿಸಿದ್ದಾರೆ. ನ್ಯೂಜಿಲೆಂಡ್ ತಂಡ ಮುನ್ನಡೆಸಲಿರುವ ಕೇನ್ ವಿಲಿಯಮ್ಸನ್ 2ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

    ಇದನ್ನೂ ಓದಿ: ಭಾರತದ ಯುವ ಕ್ರಿಕೆಟಿಗರಿಗೆ ರಾಹುಲ್ ದ್ರಾವಿಡ್ ಮತ್ತೊಮ್ಮೆ ಮಾರ್ಗದರ್ಶನ

    ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ (747ಪಾಯಿಂಟ್ಸ್) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮ (747 ಪಾಯಿಂಟ್ಸ್) ಜಂಟಿ 6ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಟೆಸ್ಟ್ ಬೌಲಿಂಗ್ ಬೌಲಿಂಗ್ ವಿಭಾಗದಲ್ಲಿ ಅನುಭವಿ ಸ್ಪಿನ್ನರ್ ಆರ್.ಅಶ್ವಿನ್ (850) 2ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಅಗ್ರ 10ರೊಳಗೆ ಸ್ಥಾನ ಪಡೆದಿರುವ ಭಾರತದ ಏಕೈಕ ಬೌಲರ್ ಎನಿಸಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ (386) ಹಾಗೂ ಅಶ್ವಿನ್ (353) ಕ್ರಮವಾಗಿ 2ನೇ ಹಾಗೂ 4ನೇ ಸ್ಥಾನದಲ್ಲಿದ್ದಾರೆ.

    ಇದನ್ನೂ ಓದಿ: ಡಬ್ಲ್ಯುಟಿಸಿ ಫೈನಲ್ ಪಂದ್ಯಕ್ಕಿಲ್ಲ ಕನ್ನಡಿಗರು ; 15ರ ಬಳಗದಲ್ಲೂ ಕೆಎಲ್ ರಾಹುಲ್, ಮಯಾಂಕ್‌ಗೆ ಸ್ಥಾನವಿಲ್ಲ, 

    ಜೂನ್ 18 ರಿಂದ ಸೌಥಾಂಪ್ಟನ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಆರಂಭವಾಗಲಿದೆ. ಡಬ್ಲ್ಯುಟಿಸಿ ಫೈನಲ್ ಬಳಿಕ ವಿರಾಟ್ ಸಾರಥ್ಯದ ಭಾರತ ತಂಡ ಇಂಗ್ಲೆಂಡ್‌ನಲ್ಲೇ ಉಳಿಯಲಿದ್ದು, ಆಗಸ್ಟ್‌ನಲ್ಲಿ ಇಂಗ್ಲೆಂಡ್ ಎದುರು 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಮತ್ತೊಂದು ಜುಲೈನಲ್ಲಿ ಶಿಖರ್ ಧವನ್ ನಾಯಕತ್ವ ನಿಗದಿತ ಓವರ್‌ಗಳ ತಂಡ ಶ್ರೀಲಂಕಾದಲ್ಲಿ ಏಕದಿನ ಹಾಗೂ ಟಿ20 ಸರಣಿ ಆಡಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts