ನನ್ನ ಅನುಮತಿ ಇಲ್ಲದೇ... ಮೆಲ್ಬೋರ್ನ್​ನಲ್ಲಿ ಪತ್ರಕರ್ತೆ ಜತೆ Virat Kohli ಜಗಳ; ವಿಡಿಯೋ ವೈರಲ್​

Virat Kohli
Published on

ಬ್ರಿಸ್​ಬೇನ್​: ಪ್ರಸ್ತುತ ನಡೆಯುತ್ತಿರುವ ಬಾರ್ಡರ್​-ಗವಾಸ್ಕರ್​ ಟ್ರೋಫಿಯಲ್ಲಿ ಭಾರತ ತಂಡ ಮೊದಲ ಪಂದ್ಯ ಹೊರತುಪಡಿಸಿದರೆ ಉಳಿದ ಎರಡು ಪಂದ್ಯಗಳಲ್ಲಿ ನೀರಸ ಪ್ರದರ್ಶನ ತೋರಿದ್ದು, ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಇನ್ನೂ ಸರಣಿಯ ನಾಲ್ಕನೇ ಪಂದ್ಯ ಡಿಸೆಂಬರ್​ 26ರಿಂದ ಮೆಲ್ಬೋರ್ನ್​ನಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಬಾಕ್ಸಿಂಗ್​ ಡೇ ಟೆಸ್ಟ್​ ಎಂದು ಕರೆಯಲಾಗುತ್ತದೆ. ಈ ಪಂದ್ಯದಲ್ಲಿ ಗೆದ್ದು ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫಿನಾಲೆ ಕನಸನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಟೀಮ್​ ಇಂಡಿಯಾ ತಯಾರಿ ನಡೆಸುತ್ತಿರುವ ನಡುವೆಯೇ ಘಟನೆಯೊಂದು ನಡೆದಿದ್ದು, ವಿರಾಟ್​ ಕೊಹ್ಲಿ (Virat Kohli) ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ.

ಕುಟುಂಬದ ವಿಚಾರಕ್ಕೆ ಸಂಬಂಧಿಸಿದಂತೆ ಸದಾ ಗೌಪ್ಯತೆ ಕಾಪಾಡಿಕೊಂಡು ಬಂದಿರುವ ವಿರಾಟ್​ (Virat Kohli) ಮಾಧ್ಯಮಗಳಿಂದ ಅಂತರವನ್ನು ಕಾಯ್ದುಕೊಂಡು ಬಂದಿದ್ದಾರೆ. ಹೀಗಿರುವಾಗಲೇ ಮೆಲ್ಬೋರ್ನ್​ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾದ ಮಾಧ್ಯಮ ವರದಿಗಾರ್ತಿಯೊಬ್ಬರು ಕೊಹ್ಲಿ ತಮ್ಮ ಪತ್ನಿ ಹಾಗೂ ಮಕ್ಕಳೊಂದಿಗೆ ತೆರಳುತ್ತಿರುವ ವಿಡಿಯೋವನ್ನು ಚಿತ್ರೀಕರಿಸುತ್ತಿರುವುದನ್ನು ಕಂಡು ಸಿಟ್ಟಾದ ವಿರಾಟ್​ ಪತ್ರಕರ್ತೆಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸದ್ಯ ವೈರಲ್​ ಆಗಿದೆ.

ಇನ್ನೂ ವಿರಾಟ್​ (Virat Kohli) ಅವರ ಪತ್ನಿ ಹಾಗೂ ಮಕ್ಕಳ ವಿಡಿಯೋವನ್ನು ಚಿತ್ರೀಕರಿಸಿಲ್ಲ ಎಂಬ ವಿಚಾರ ಅರಿತ ವಿರಾಟ್​ ಆ ಬಳಿಕ ಸ್ಪಷ್ಟನೆಯನ್ನು ನೀಡಿದ್ದಾರೆ. ನೋಡಿ ನನಗೆ ನನ್ನ ಮಕ್ಕಳೊಂದಿಗೆ ಕೆಲವು ಸಮಯ ಕಳೆಯಬೇಕಾಗಿದೆ. ಹೀಗಿರುವಾಗ ನೀವು ನನ್ನ ಅನುಮತಿ ಇಲ್ಲದೇ ಫೋಟೋ ಅಥವಾ ವಿಡಿಯೋ ತೆಗೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪರಿಸ್ಥಿತಿ ತಣ್ಣಗಾದ ಬಳಿಕ ಅಲ್ಲಿದ್ದ ಕ್ಯಾಮರಾಮ್ಯಾನ್​ಗಳು ಹಾಗೂ ರಿಪೋರ್ಟ್​ಗಳೊಟ್ಟಿಗೆ ವಿರಾಟ್​​ (Virat Kohli) ಫೋಟೋವನ್ನು ತೆಗೆಸಿಕೊಂಡಿದ್ದಾರೆ.

ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯಲಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್ (Border-Gavaskar)​ ಟೆಸ್ಟ್​ ಸರಣಿಯೂ ನವೆಂಬರ್​ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net