ವಿಜಯೋತ್ಸವದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ವಿರಾಟ್​ ಕೊಹ್ಲಿ!; ವಿಡಿಯೋ ವೈರಲ್​

Virat Kohli

ಮುಂಬೈ: ಈಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಕಪ್​ನಲ್ಲಿ ಟೀಮ್​ ಇಂಡಿಯಾ ಚಾಂಪಿಯನ್​ ಆಗಿದ್ದು, ವಿಶ್ವಚಾಂಪಿಯನ್ನರಿಗೆ ಮುಂಬೈನಲ್ಲಿ ನಿನ್ನೆ (ಜುಲೈ 04) ಅದ್ಧೂರಿ ಸ್ವಾಗತ ದೊರೆತಿದೆ. ಟೀಮ್​ ಇಂಡಿಯಾ ವಿಜಯೋತ್ಸವ ಆಚರಣೆಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದು, ಸಂಭ್ರಮಾಚರಣೆಯನ್ನು ಸ್ಮರಣೀಯವಾಗಿಸಿದ್ದಾರೆ. ಸಂಭ್ರಮಾಚರಣೆ ಮುಗಿದ ಬೆನ್ನಲ್ಲೇ ವಿರಾಟ್​ ಕೊಹ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ವಿದೇಶಕ್ಕೆ ತೆರಳಿದ್ದಾರೆ.

ನಿನ್ನೆ (ಜುಲೈ 04) ಬೆಳಗ್ಗೆ ಪ್ರಧಾನಿ ಮೋದಿ ಭೇಟಿ ಬಳಿಕ ಮುಂಬೈಗೆ ಬಂದಿಳಿದ ಭಾರತೀಯ ಕ್ರಿಕೆಟ್​ ತಂಡದ ಆಟಗಾರರಿಗೆ ಫ್ಯಾನ್ಸ್​ ಭರ್ಜರಿ ಸ್ವಾಗತ ನೀಡಿದರು. ನ್ಯಾಶನಲ್ ಸೆಂಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್‌ನಿಂದ ವಾಂಖೆಡೆ ಸ್ಟೇಡಿಯಂಗೆ ಓಪನ್ ಬಸ್​ನಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸಿದರು. ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕರತ್ತ ಕೈಬೀಸುತ್ತಾ ಟಿ20 ವಿಶ್ವಕಪ್ ಟ್ರೋಫಿಯನ್ನು ಹೆಮ್ಮೆಯಿಂದ ಎತ್ತಿ ಹಿಡಿದ ಆಟಗಾರರು ಅಭಿಮಾನಿಗಳ ಜೊತೆ ಸಂಭ್ರದಲ್ಲಿ ಮಿಂದೆದ್ದರು.

ಇದನ್ನೂ ಓದಿ: ನೀಲಿಮಯವಾದ ಮರಿನಾ ಡ್ರೈವ್ ಮುಗಿಲಮುಟ್ಟಿದ ಭಾರತೀಯ ಅಬಿಮಾನಿಗಳ ಸಂಭ್ರಮ, ವೈರಲ್​ ಆಗುತ್ತಿದೆ ಫ್ಯಾನ್ಸ್​ ಗೆಸ್ಚರ್​

ಸಂಭ್ರಮಾಚರಣೆ ಬಳಿಕ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ವಿರಾಟ್​ ಕೊಹ್ಲಿ ಲಂಡನ್​ಗೆ ಪ್ರಯಾಣ ಬೆಳೆಸಿದ್ದಾರೆ. ಕುಟುಂಬದೊಂದಿಗೆ ಸಮಯ ಕಳೆಯಲು ವಿರಾಟ್​ ಲಂಡನ್​ಗೆ ಹಾರಿದ್ದು, ಕೆಲ ದಿನಗಳ ಕಾಲ ಅಲ್ಲಿಯೇ ಇದ್ದು ವಿಶ್ರಾಂತಿ ಪಡೆಯಲಿದ್ದಾರೆ. ಕೊಹ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರು ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಟಿ20 ವಿಶ್ವಕಪ್​ನಲ್ಲಿ ಭಾರತ ಗೆದ್ದ ನಂತರ ವಿರಾಟ್​ ಕೊಹ್ಲಿ ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಯುವ ಹಾಗೂ ಪ್ರತಿಭಾನ್ವಿತ ಆಟಗಾರರಿಗೆ ಹೆಚ್ಚು ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಪೋಸ್ಟ್​ ಮ್ಯಾಚ್​ ಪ್ರೆಸೆಂಟೇಷನ್​ನಲ್ಲಿ ತಿಳಿಸಿದ್ದರು.

Share This Article

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…