More

    ಐಸಿಸಿ ಟೆಸ್ಟ್ ರ‌್ಯಾಂಕಿಂಗ್‌ನಲ್ಲಿ 2ನೇ ಸ್ಥಾನ ಕಾಯ್ದುಕೊಂಡ ವಿರಾಟ್ ಕೊಹ್ಲಿ, 9ನೇ ಸ್ಥಾನಕ್ಕೆ ಕುಸಿದ ಬುಮ್ರಾ

    ದುಬೈ: ಭಾರತ ತಂಡದ ನಾಯಕ ವಿರಾ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪ್ರಕಟಿಸಿದ ಟೆಸ್ಟ್ ಆಟಗಾರರ ರ‌್ಯಾಂಕಿಂಗ್‌ನಲ್ಲಿ 2ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಬ್ಯಾಟಿಂಗ್ ವಿಭಾಗದ ಅಗ್ರ 10 ಮಂದಿಯಲ್ಲಿ ಭಾರತದ ಮೂವರು ಸ್ಥಾನ ಉಳಿಸಿಕೊಂಡಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ವಿರಾಟ್ ಕೊಹ್ಲಿ 886 ರೇಟಿಂಗ್ ಪಾಯಿಂಟ್ಸ್ ಕಲೆಹಾಕಿದರೆ, ಭಾರತದ ಚೇತೇಶ್ವರ ಪೂಜಾರ (766) ಹಾಗೂ ಅಜಿಂಕ್ಯ ರಹಾನೆ (726) ಕ್ರಮವಾಗಿ 8 ಹಾಗೂ 10ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ಅಗ್ರಸ್ಥಾನದಲ್ಲಿದ್ದಾರೆ.

    ಇದನ್ನೂ ಓದಿ: ಅರ್ಜುನ ಪ್ರಶಸ್ತಿಗೆ ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಹೆಸರು ಶಿಫಾರಸು

    ಬೌಲಿಂಗ್ ವಿಭಾಗದಲ್ಲಿ ವೇಗಿ ಜಸ್‌ಪ್ರೀತ್ ಬುಮ್ರಾ ಒಂದು ಸ್ಥಾನ ಕುಸಿತ ಅನುಭವಿಸಿದರೆ, ರವೀಂದ್ರ ಜಡೇಜಾ ಆಲ್ರೌಂಡರ್ ವಿಭಾಗದಲ್ಲಿ 3ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಪಾಕಿಸ್ತಾನದ ಬ್ಯಾಟ್ಸ್‌ಮನ್ ಬಾಬರ್ ಅಜಮ್ ವೃತ್ತಿ ಶ್ರೇಷ್ಠ 5ನೇ ಸ್ಥಾನಕ್ಕೇರಿದ್ದಾರೆ. ಬುಮ್ರಾ 779 ಪಾಯಿಂಟ್ಸ್ ಹೊಂದಿದ್ದರೆ, ಪಾಕಿಸ್ತಾನದ ಮೊಹಮದ್ ಅಬ್ಬಾಸ್ (785) 8ನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (904) ಅಗ್ರಸ್ಥಾನದಲ್ಲಿದ್ದಾರೆ.

    ಇದನ್ನೂ ಓದಿ: ಇನ್ನು ಬಿಕಿನಿ ಚಿತ್ರ ಪೋಸ್ಟ್​ ಮಾಡುವುದಿಲ್ಲ ಎಂದು ಟೆನಿಸ್​ ತಾರೆ ಬೌಚಾರ್ಡ್​ ಹೇಳಿದ್ಯಾಕೆ?

    ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಭಾರತ ತಂಡ 360 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡರೆ, ಆಸ್ಟ್ರೇಲಿಯಾ (296), ಇಂಗ್ಲೆಂಡ್ (279) ಕ್ರಮವಾಗಿ 2ನೇ ಹಾಗೂ ಮೂರನೇ ಸ್ಥಾನದಲ್ಲಿವೆ. ಪಾಕಿಸ್ತಾನ 153 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.

    VIDEO: ಸಿಕ್ಕಿ ರೆಡ್ಡಿ ಹುಟ್ಟುಹಬ್ಬಕ್ಕೆ ಸಿಕ್ಕ ಸರ್‌ಪ್ರೈಸ್ ಗಿಫ್ಟ್ ಏನು ಗೊತ್ತೇ..?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts