ನಾಗ್ಪುರ: ಇಲ್ಲಿನ ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, 35 ಓವರ್ಗಳ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 182 ರನ್ಗಳಿಸಿದೆ
ಇನ್ನೂ ಮೊದಲನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದ್ದು, ಈ ಬಗ್ಗೆ ಬಿಸಿಸಿಐ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಸ್ಪಷ್ಟನೆ ನೀಡಿದ್ದು, ವಿರಾಟ್ ಕೊಹ್ಲಿ ಆಡುವ 11ರ ಬಳಗದಿಂದ ಹೊರಗುಳಿಯಲು ಕಾರಣವನ್ನು ನೀಡಿದ್ದಾರೆ.
ಟಾಸ್ ವೇಳೆ ಈ ಬಗ್ಗೆ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಮೊಣಕಾಲಿನ ಗಾಯದಿಂದ ವಿರಾಟ್ ಮೊದಲ ಏಕದಿನ ಪಂದ್ಯ ತಪ್ಪಿಸಿಕೊಳ್ಳುತ್ತಿದ್ದು, ಎರಡನೇ ಪಂದ್ಯದ ವೇಳೆಗೆ ಫಿಟ್ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಬಿಸಿಸಿಐ ಕೂಡ ವಿರಾಟ್ ಕೊಹ್ಲಿ ಆಡದಿರುವ ಕುರಿತು ಪ್ರಕಟಣೆಯನ್ನು ಹೊರಡಿಸಿದೆ.
Here is why Virat Kohli is missing ODI series opener against England in Nagpur
Read @ANI Story | https://t.co/fUx0x7cLS5#ViratKohli #INDvsENG #TeamIndia #cricket #BCCI pic.twitter.com/PW7q7UXPg8
— ANI Digital (@ani_digital) February 6, 2025
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂಲಕ ಯಶಸ್ವಿ ಜೈಸ್ವಾಲ್ ಹಾಗೂ ಹರ್ಷಿತ್ ರಾಣಾ ಪದಾರ್ಪಣೆ ಮಾಡುತ್ತಿದ್ದು, ವಿರಾಟ್ ಬದಲಿಗೆ ಶ್ರೇಯಸ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನೂ ಕೆ.ಎಲ್. ರಾಹುಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದು, ಮೊದಲ ಪಂದ್ಯದ ಸಾಧಕ ಭಾದಕವನ್ನು ನೋಡಿಕೊಂಡು ಎರಡನೇ ಪಂದ್ಯದಲ್ಲಿ ಬದಲಾವಣೆ ಮಾಡಬಹುದು ಎಂದು ಹೇಳಲಾಗಿದೆ.
ಈಚೆಗೆ ಮುಕ್ತಾಯಗೊಂಡ ಟಿ20 ಸರಣಿಯನ್ನು 4-1 ಅಂತರದಿಂದ ಜಯಿಸುವ ಮೂಲಕ ಟೀಮ್ ಇಂಡಿಯಾ ಭಾರೀ ಹುಮ್ಮಸ್ಸಿನಲ್ಲಿದ್ದು, ಏಕದಿನ ಸರಣಿಯಲ್ಲಿ ಗೆದ್ದು ಚಾಂಪಿಯನ್ಸ್ ಟ್ರೋಫಿಗೆ ಲಗ್ಗೆ ಇಡಲು ಟೀಮ್ ಇಂಡಿಯಾ ಸಜ್ಜಾಗಿದೆ. ಟಿ–20 ಸರಣಿ ಸೋತಿರುವ ಇಂಗ್ಲೆಂಡ್ ತಂಡ ಇಲ್ಲಿ ಛಾಪು ಮೂಡಿಸುವ ವಿಶ್ವಾಸದಲ್ಲಿದೆ. ಅಂತಿಮವಾಗಿ ಜಯ ಯಾರ ಪಾಲಾಗಲಿದೆ ಎಂದು ಕಾದು ನೋಡಬೇಕಿದೆ.
Champions Trophy ಬಳಿಕ ಏಕದಿನ ಮಾದರಿಗೆ ನಿವೃತ್ತಿ? Rohit Sharma ಹೇಳಿದ್ದಿಷ್ಟು
ಹೈ Heels ಕೊಡಿಸಲಿಲ್ಲವೆಂದು ಪತಿಯ ವಿರುದ್ಧ ಮುನಿಸು; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ ಮಾಡಿದ್ದೇನು ನೀವೇ ನೋಡಿ