More

  ಆಸೀಸ್‌ನ ಮಾಜಿ ನಾಯಕ ರಿಕಿ ಪಾಂಟಿಂಗ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ: ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್

  ಅಹಮದಾಬಾದ್: ವಿರಾಟ್ ಕೊಹ್ಲಿ (765) ಐಸಿಸಿ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್ ಎನಿಸಿದರು. ಜತೆಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಗರಿಷ್ಠ ರನ್‌ಗಳಿಸಿದ ದಾಖಲೆಯನ್ನು ಕೊಹ್ಲಿ ಹೊಂದಿದ್ದು, 2014ರಲ್ಲಿ 319 ರನ್ ಕಲೆ ಹಾಕಿದ್ದರು. ಐಪಿಎಲ್ ಆವೃತ್ತಿಯೊಂದರಲ್ಲಿ (973) ಗರಿಷ್ಠ ರನ್ ಗಳಿಸಿದ ದಾಖಲೆಯೂ ಅವರದಾಗಿದೆ.

  ಪಾಂಟಿಂಗ್ ಹಿಂದಿಕ್ಕಿದ ಕೊಹ್ಲಿ:  ವಿರಾಟ್ ಕೊಹ್ಲಿ (1,792) ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ಗಳಿಸಿದ ಆಸೀಸ್‌ನ ಮಾಜಿ ನಾಯಕ ರಿಕಿ ಪಾಂಟಿಂಗ್ (1,743)ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದರು. ವಿರಾಟ್ ಕೊಹ್ಲಿ 37 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ಪಾಂಟಿಂಗ್ 46 ಇನಿಂಗ್ಸ್ ತೆಗೆದುಕೊಂಡಿದ್ದರು. ಸಚಿನ್ ತೆಂಡುಲ್ಕರ್ 47 ಇನಿಂಗ್ಸ್‌ಗಳಲ್ಲಿ 2,278 ರನ್ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಕುಮಾರ್ ಸಂಗಕ್ಕರ (1,532) ಅವರನ್ನು ಹಿಂದಿಕ್ಕಿದ ರೋಹಿತ್ ಶರ್ಮ (1,560) 4ನೇ ಸ್ಥಾನದಲ್ಲಿದ್ದಾರೆ.

  ರಾಜ್ಯೋತ್ಸವ ರಸಪ್ರಶ್ನೆ - 21

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts