More

    ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ದಾಖಲೆ ಬರೆದ ವಿರಾಟ್​ ಕೊಹ್ಲಿ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಪಂಜಾಬ್​ ಕಿಂಗ್ಸ್​ ವಿರುದ್ಧ ನಾಲ್ಕು ವಿಕೆಟ್​ಗಳ ಜಯ ಸಾಧಿಸಿದ್ದು, ತಮ್ಮ ಅರ್ಧಶತಕದ ಮೂಲಕ ವಿರಾಟ್​ ಕೊಹ್ಲಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಕಂಬ್ಯಾಕ್​ ಮಾಡಿದ್ದಾರೆ. ಆರ್​ಸಿಬಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ವಿರಾಟ್​ ಕೊಹ್ಲಿ ಟಿ-20 ಮಾದರಿಯಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

    ಎರಡು ತಿಂಗಳ ನಂತರ ಸುದೀರ್ಘ ಕ್ರಿಕೆಟ್ ಅಂಗಳದಿಂದ ದೂರ ಉಳಿದಿದ್ದ ಆರ್ ಸಿಬಿಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 11 ಬೌಂಡರಿ, 2 ಸಿಕ್ಸರ್​ ಸಹಿತ 49 ಎಸೆತಗಳಲ್ಲಿ 77 ರನ್​ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಚೆನ್ನೈ ಸೂಪರ್​ಕಿಂಗ್ಸ್​ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸದೆ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ ಕೊಹ್ಲಿ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ತವರಿನ ಅಭಿಮಾನಿಗಳಿಗೆ ರಸದೌತಣ ನೀಡಿದರು.

    ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 77 ರನ್ ಸಿಡಿಸಿ ಹರ್ಷಲ್ ಪಟೇಲ್ ಗೆ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ ಟಿ20 ಸ್ವರೂಪದಲ್ಲಿ 100ನೇ ಅರ್ಧಶತಕ ಸಿಡಿಸಿದ ಮೊದಲ ಭಾರತದ ಆಟಗಾರ ಎಂಬ ದಾಖಲೆ ನಿರ್ಮಿಸಿದರು. ಟೀಮ್ ಇಂಡಿಯಾ ಹಾಗೂ ಆರ್ ಸಿಬಿಯ‌ ಮಾಜಿ ನಾಯಕ ಚುಟುಕು ಸ್ವರೂಪದಲ್ಲಿ 92 ಅರ್ಧಶತಕ ಹಾಗೂ 8 ಶತಕ ಸಿಡಿಸಿದ್ದಾರೆ.

    Virat Kohli

    ಇದನ್ನೂ ಓದಿ: ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮೂನ್ಸೂಚನೆ

    ಇದರ ಜೊತೆಗೆ ಟೀಮ್​ ಇಂಡಿಯಾ ಮಾಜಿ ಆಟಗಾರ ಸುರೇರ್ಶ್ ರೈನಾ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಟಿ-20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಕ್ಯಾಚ್​ಗಳನ್ನು ಪಡೆಯುವ ಮೂಲಕ ವಿರಾಟ್​ ಕೊಹ್ಲಿ ಸುರೇಶ್​ ರೈನಾ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. 35 ವರ್ಷದ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್‌ನ ಬ್ಯಾಟರ್‌ಗಳಾದ ಜಾನಿ ಬೈರ್‌ಸ್ಟೋವ್ ಮತ್ತು ಶಿಖರ್ ಧವನ್ ಅವರ ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಟಿ20 ಸ್ವರೂಪದಲ್ಲಿ ತಮ್ಮ 174ನೇ ಕ್ಯಾಚ್​​ಅನ್ನು ಪೂರ್ಣಗೊಳಿಸಿದ್ದಾರೆ.

    ಸುರೇಶ್​ ರೈನಾ ಈವರೆಗೆ 172 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ 167 ಕ್ಯಾಚ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಭಾರತದ ಬ್ಯಾಟ್ಸ್‌ಮನ್‌ಗಳಾದ ಮನೀಶ್ ಪಾಂಡೆ ಮತ್ತು ಸೂರ್ಯಕುಮಾರ್ ಯಾದವ್ ಕ್ರಮವಾಗಿ 146 ಮತ್ತು 136 ಕ್ಯಾಚ್‌ಗಳೊಂದಿಗೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts