ಬ್ರಿಸ್ಬೇನ್: ಇಲ್ಲಿನ ಗಾಬಾ ಕ್ರೀಢಾಂಗಣದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದದು ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಪಂದ್ಯದ ಮೊದಲೆರಡು ಸೆಷನ್ ಮಳೆಗೆ ಆಹುತಿಯಾಗಿದೆ. 13.2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಆಸ್ಟ್ರೇಲಿಯಾ 28ರನ್ಗಳಿಸಿದೆ.
ಮೂರನೇ ಟೆಸ್ಟ್ ಪಂದ್ಯದಲ್ಲಿ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿರುವ ಭಾರತ ತಂಡವು ಹರ್ಷಿತ್ ರಾಣಾ ಅವರ ಬದಲಿಗೆ ಆಕಾಶ್ ದೀಪ್ ಹಾಗೂ ಅಶ್ವಿನ್ ಬದಲಿಗೆ ರವೀಂದ್ರ ಜಡೇಜಾಗೆ ಅವಕಾಶ ನೀಡಿದೆ. ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಬೋಲ್ಯಾಂಡ್ ಬದಲಿಗೆ ಜೋಶ್ ಹೇಜಲ್ವುಡ್ ಅವಕಾಶ ನೀಡಲಾಗಿದೆ. ಇನ್ನೂ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ (Virat Kohli) ದಾಖಲೆಯೊಂದನ್ನು ಬರೆದಿದ್ದಾರೆ.
ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಆಸ್ಟ್ರೇಲಿಯಾ ವಿರುದ್ಧ 100 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದರು. ಅಲ್ಲದೇ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಈ ಸಾಧನೆ ಮಾಡಿದ್ದು, ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳನ್ನು ಆಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ (Sachin Tendulkar) 6,707 ರನ್ ಕಲೆಹಾಕಿದರೆ, 100 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ (Virat Kohli) 5,326 ರನ್ ಗಳಿಸಿದ್ದಾರೆ. ಇದೀಗ ಬ್ರಿಸ್ಬೇನ್‌ನಲ್ಲಿ 100ನೇ ಪಂದ್ಯವಾಡುತ್ತಿರುವ ವಿರಾಟ್ ಕೊಹ್ಲಿ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದ್ದು, ಅಭಿಮಾನಿಗಳು ಭಾರೀ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಒತ್ತಡ ತಾಳಲಾರದೆ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಪ್ರಾಣಬಿಟ್ಟ Engineer