17.8 C
Bengaluru
Wednesday, January 22, 2020

ಇಂಗ್ಲೆಂಡ್‌ – ಭಾರತ ; ಕೇಸರಿ ಬಣ್ಣದ ಹೊಸ ಜೆರ್ಸಿ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬರ್ಮಿಂಗ್‌ಹ್ಯಾಂ: ಬರ್ಮಿಂಗ್ ​​ಹ್ಯಾಮ್​​​ನಲ್ಲಿ ನಡೆಯಲಿರುವ ವಿಶ್ವಕಪ್‌ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದ್ದು, ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯುವುದು ಕುತೂಹಲ ಮೂಡಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇದೀಗ ಕೇಸರಿ ಜೆರ್ಸಿ ಕುರಿತಂತೆ ಮಾತನಾಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.

ಕೊಹ್ಲಿ ಜೆರ್ಸಿಯ ಡಿಸೈನ್‌ ಅನ್ನು ಇಷ್ಟಪಟ್ಟಿದ್ದು, 10ಕ್ಕೆ 8 ಅಂಕಗಳನ್ನು ನೀಡಿದ್ದಾರೆ. ಜೆರ್ಸಿ ಫಿಟ್‌ ಚೆನ್ನಾಗಿದೆ, ಈ ಬದಲಾವಣೆ ಕೂಡ ಚೆನ್ನಾಗಿದೆ. ನಾನು ಅದನ್ನು ಇಷ್ಟಪಡುತ್ತೇನೆ, ಅದೊಂದು ಉತ್ತಮ ಆಯ್ಕೆ ಎಂದೇ ನಾನು ಭಾವಿಸುತ್ತೇನೆ ಎಂದಿದ್ದಾರೆ.

ನಿಜವಾಗಿಯೂ ಹೇಳುತ್ತಿದ್ದೇನೆ. ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ. ಜೆರ್ಸಿ ಕೇವಲ ಒಂದು ಪಂದ್ಯಕ್ಕಷ್ಟೆ ಸೀಮಿತ. ಇದೇ ಜೆರ್ಸಿಯನ್ನು ಶಾಶ್ವತವಾಗಿ ಬಳಸಿ ಆಡುತ್ತೇನೆ ಎಂದು ಭಾವಿಸುವುದಿಲ್ಲ. ಏಕೆಂದರೆ ನೀಲಿ ಯಾವಾಗಲೂ ನಮ್ಮ ಬಣ್ಣವಾಗಿದೆ. ಅದನ್ನು ಧರಿಸಲು ಹೆಮ್ಮೆ ಎನಿಸುತ್ತದೆ. ಬದಲಾವಣೆಗಾಗಿ ಮಾತ್ರ ಕೇಸರಿ ಬಣ್ಣ ಉತ್ತಮ ಆಯ್ಕೆಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಭಾರತದ ಮಹಿಳಾ ಫುಟ್‌ಬಾಲ್‌ ತಂಡವು ಎಎಫ್‌ಸಿ ಕಪ್‌ ಟೂರ್ನಮೆಂಟ್‌ನಲ್ಲಿ ಆರೆಂಜ್‌ ಜೆರ್ಸಿಯನ್ನು ಹೊಂದಿದ್ದರು. (ಏಜೆನ್ಸೀಸ್)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...