ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಇನ್ನೂ ಸರಣಿಯ ಕೊನೆ ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ (52 ರನ್, 55 ಎಸೆತ, 7 ಬೌಂಡರಿ, 1 ಸಿಕ್ಸರ್) ಫಾರ್ಮ್ಗೆ ಮರಳಿದ್ದು, ದಾಖಲೆಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಇನ್ನೂ ಸರಣಿಯ ಮೊದಲ ಪಂದ್ಯವನ್ನು ಮೊಣಕಾಲಿನ ನೋವಿನಿಂದಾಗಿ ತಪ್ಪಿಸಿಕೊಂಡಿದ್ದ ವಿರಾಟ್ ಕೊಹ್ಲಿ (Virat Kohli) ಎರಡನೇ ಹಾಗೂ ಮೂರನೇ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದರು. ಎರಡನೇ ಪಂದ್ಯದಲ್ಲಿ ಐದು ರನ್ಗಳಿಗೆ ಔಟ್ ಆಗಿದ್ದ ವಿರಾಟ್ ಕೊಹ್ಲಿ ಮೂರನೇ ಮ್ಯಾಚ್ನಲ್ಲಿ ಅರ್ಧಶತಕ ಗಳಿಸುವ ಮೂಲಕ ಫಾರ್ಮ್ಗೆ ಮರಳಿದ್ದಾರೆ. ಫಾರ್ಮ್ಗೆ ಮರಳುವ ಮೂಲಕ ವಿರಾಟ್ ಕೊಹ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
𝐊𝐢𝐧𝐠’𝐬 𝐜𝐨𝐧𝐪𝐮𝐞𝐫𝐞𝐝 𝐭𝐡𝐞 𝐜𝐨𝐧𝐭𝐢𝐧𝐞𝐧𝐭! 👑 🙇🏼♂️
Fastest ever to rack up 1️⃣6️⃣,0️⃣0️⃣0️⃣ international runs in Asia in just 3️⃣4️⃣0️⃣ innings! 👏#PlayBold #ನಮ್ಮRCB #INDvENG #ViratKohli pic.twitter.com/xJhi0KYv0a
— Royal Challengers Bengaluru (@RCBTweets) February 12, 2025
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ಫಾರ್ಮ್ಗೆ ಮರಳಿದ ವಿರಾಟ್ ಕೊಹ್ಲಿ (Virat Kohli) ಏಷ್ಯಾದಲ್ಲಿ 16 ಸಾವಿರ ರನ್ ಪೂರ್ಣಗೊಳಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವಿರಾಟ್ 340 ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ್ದು, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 353, ಕುಮಾರ್ ಸಂಗಕ್ಕಾರ 360 ಹಾಗೂ ಮಹೇಲಾ ಜಯವರ್ಧನೆ 401 ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ವಿರಾಟ್ ಈ ದಾಖಲೆಯನ್ನು ಮುರಿದಿದ್ದಾರೆ.
ಇದಲ್ಲದೆ ಇಂಗ್ಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 4 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ 87 ಪಂದ್ಯಗಳನ್ನು ಆಡಿರುವ ವಿರಾಟ್ 41.23 ಸರಾಸರಿಯಲ್ಲಿ 8 ಶತಕ ಮತ್ತು 32 ಅರ್ಧಶತಕಗಳನ್ನು ಒಳಗೊಂಡಂತೆ 4 ಸಾವಿರ ರನ್ ಬಾರಿಸಿದ್ದಾರೆ. ಫಾರ್ಮ್ಗೆ ಮರಳುವ ಮೂಲಕ ವಿರಾಟ್ ಕೊಹ್ಲಿ (Virat Kohli) ಒಮ್ಮೆಲೆಗೆ ಎರಡು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
Team India ಆಲ್ರೌಂಡ್ ಪ್ರದರ್ಶನಕ್ಕೆ ಆಂಗ್ಲರು ಕ್ಲೀನ್ ಬೌಲ್ಡ್; ಸರಣಿ ಕ್ಲೀನ್ಸ್ವೀಪ್ ಮಾಡಿದ ಆತಿಥೇಯರು