More

  Virat Kohli: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶೇಷ ದಾಖಲೆ ಬರೆದ ಕಿಂಗ್ ಕೊಹ್ಲಿ!

  ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 100ನೇ ಟಿ20 ಪಂದ್ಯವನ್ನು ಆಡಿದರು.

  ಇದನ್ನೂ ಓದಿ: IPL 2024: ರೋಹಿತ್ ಶರ್ಮಾ ವಿಕೆಟ್​ಗೆ​ ಸಂಭ್ರಮಿಸಿದ್ದ ಸಿಎಸ್​ಕೆ ಅಭಿಮಾನಿಯನ್ನು ಕೊಲೆಗೈದ MI ಫ್ಯಾನ್ಸ್​

  ಇಂದು ( ಮಂಗಳವಾರ) ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2024​ ಪಂದ್ಯದಲ್ಲಿ ಈ ಐತಿಹಾಸಿಕ ಸಾಧನೆ ಮಾಡಿ ದಾಖಲೆ ಮಾಡಿದ್ದಾರೆ. ಒಂದೇ ಮೈದಾನದಲ್ಲಿ ಬರೋಬ್ಬರಿ 100 ಟಿ20 ಪಂದ್ಯವನ್ನು ಆಡಿದ ಭಾರತದ ಮೊದಲ ಕ್ರಿಕೆಟರ್​ ಕೊಹ್ಲಿ.

  ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಎರಡನೇ ಸ್ಥಾನಕ್ಕೆ ಸೇರಿದ್ದಾರೆ . ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಎಂಎಸ್ ಧೋನಿ 69 ಪಂದ್ಯಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ 3,276 ರನ್​ ಗಳಿಸಿದ್ದಾರೆ. ಅದರಲ್ಲಿ 4 ಶತಕ 25 ಅರ್ಧಶತಕ ಸೇರಿವೆ.

  ಒಂದೇ ಸ್ಥಳದಲ್ಲಿ ಹೆಚ್ಚಿನ T20 ಪಂದ್ಯಗಳನ್ನು ಆಡುವ ಭಾರತೀಯ ಆಟಗಾರರು

  100 – ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ
  80 – ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ
  69 – ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎಂಎಸ್ ಧೋನಿ

  ಐಪಿಎಲ್ ನಕಲಿ ಟಿಕೆಟ್ ಮಾರಾಟ ಜಾಲ ಪತ್ತೆ: ಏಳು ಜನರ ಬಂಧನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts