

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸೀಸ್ ವಿರುದ್ಧ ಪ್ರಬಲ ಹಿಡಿತವನ್ನು ಸಾಧಿಸಿದ್ದು, ಫೈನಲ್ಗೆ ಲಗ್ಗೆ ಇಡುವ ಮುನ್ಸೂಚನೆಯನ್ನು ನೀಡಿದೆ.
ಇನ್ನೂ ಟೀಮ್ ಇಂಡಿಯಾದ ಮಾಜಿ ನಾಯಕ, ರನ್ ಮೆಷಿನ್, ದಾಖಲೆಗಳ ಸರದಾರ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ (Virat Kohli) ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲೂ ದಿಗ್ಗಜರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ತಮ್ಮದಾಗಿಸಿಕೊಂಡಿದ್ದಾರೆ. ರಾಹುಲ್ ದ್ರಾವಿದ್ ಹಾಗೂ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ದಾಖಲೆ ಎಂಬುದು ಮತ್ತಷ್ಟು ವಿಶೇಷವಾಗಿದೆ.
27ನೇ ಓವರ್ನಲ್ಲಿ ಜೋಸ್ ಇಂಗ್ಲೀಸ್ ಕ್ಯಾಚನ್ನು ಹಿಡಿಯುವ ಮೂಲಕ ವಿರಾಟ್ ಕೊಹ್ಲಿ ಈ ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚಚು ಕ್ಯಾಚ್‌ಗಳನ್ನು ಪಡೆದ ಭಾರತೀಯ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಈ ಮೊದಲು ಈ ದಾಖಲೆಯು ರಾಹುಲ್ ದ್ರಾವಿಡ್ ಹಾಗೂ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಇದೀಗ ಕೊಹ್ಲಿ ಈ ದಾಖಲೆಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ಧಾರೆ.
ಇನ್ನು ಟೆಸ್ಟ್ ಕ್ರಿಕೆಟ್ ಬಗ್ಗೆ ಹೇಳುವುದಾದರೆ, ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ 123 ಪಂದ್ಯಗಳನ್ನು ಆಡಿದ್ದು, ಒಟ್ಟು 210 ಇನ್ನಿಂಗ್ಸ್‌ಗಳಲ್ಲಿ 121 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದಲ್ಲದೆ, ಕೊಹ್ಲಿ 125 ಟಿ20 ಅಂತರರಾಷ್ಟ್ರೀಯ ಪಂದ್ಯಗಳ 117 ಇನ್ನಿಂಗ್ಸ್‌ಗಳಲ್ಲಿ 54 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ದಾಖಲೆಯನ್ನು ತಮ್ಮ ತೆಕ್ಕೆಗೆ ಹಾಕಿಕೊಂಡಿದ್ರಾರೆ.
https://www.vijayavani.net/by-vijayendra-slams-congress-over-percentage-allegations