More

    ರೋಹಿತ್​-ಕೊಹ್ಲಿ ಉಪಸ್ಥಿತಿ ತಂಡಕ್ಕೆ ಹೆಚ್ಚು ಉಪಕಾರಿಯಾಗಲಿದೆ: ಸುರೇಶ್​ ರೈನಾ

    ನವದೆಹಲಿ: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ ಅನುಭವಿಗಳಾದ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ರಾಷ್ಟ್ರೀಯ ತಂಡಕ್ಕೆ ಮರಳಿದ್ದು, ಮುಂಬರುವ ಟಿ-20 ವಿಶ್ವಕಪ್​ ದೃಷ್ಠಿಯಿಂದ ಇದೊಂದು ಉತ್ತಮ ನಿರ್ಧಾರ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸುರೇಶ್​ ರೈನಾ ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಮಾತನಾಡಿರುವ ಸುರೇಶ್​ ರೈನಾ 14 ತಿಂಗಳ ನಂತರ ರೋಹಿತ್ ಮತ್ತು ಕೊಹ್ಲಿ ಅವರನ್ನು ಭಾರತದ ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅವರ ಉಪಸ್ಥಿತಿಯು ತಂಡಕ್ಕೆ ಸಾಕಷ್ಟು ಗಟ್ಟಿತನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ; ನಾವು ಹಿಂದೂ ಧರ್ಮದ ವಿರೋಧಿಗಳಲ್ಲ ಎಂದ ಸಿಎಂ ಸಿದ್ದರಾಮಯ್ಯ

    ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ಈ ಬಾರಿ ಟಿ-20 ವಿಶ್ವಕಪ್​ ನಡೆಯಲಿದ್ದು, ಅಲ್ಲಿನ ಪಿಚ್​ಗಳು ಸ್ಬಲ್ಪ ಟ್ರಕಿ ಎಂದೇ ಹೇಳಬಹುದಾಗಿದೆ. ಅಲ್ಲಿನ ಪಿಚ್​ಗೆ ಸರಿಹೊಂದುವಂತೆ ರೋಹಿತ್​ ಹಾಗೂ ಕೊಹ್ಲಿಯ ಅನುಭವ ತಂಡಕ್ಕೆ ಅಗತ್ಯವಾಗಿದ್ದು, ಟೀಂ ಇಂಡಿಯಾದ ಬ್ಯಾಟಿಂಗ್​ಗೆ ಉತ್ತೇಜನ ನೀಡಲಿದೆ. ಇದು ಭಾರತ ಎರಡನೇ ಬಾರಿಗೆ ಟಿ-20 ವಿಶ್ವಕಪ್​ ಗೆಲುವಲ್ಲಿ ಸಹಕರಿಸುತ್ತದೆ ಎಂದು ಹೇಳಿದ್ದಾರೆ.

    ಏಕದಿನ ವಿಶ್ವಕಪ್​ನಲ್ಲಿ ವಿರಾಟ್​ ಕೊಹ್ಲಿಯ ಫಾರ್ಮ್​ ಉತ್ತಮವಾಗಿತ್ತು ಮತ್ತು ರೋಹಿತ್​ ಶರ್ಮಾ ಡ್ರೆಸ್ಸಿಂಗ್​ ರೂಂನಲ್ಲಿ ತಂಡದ ಸದಸ್ಯರನ್ನು ಹುರಿದುಂಬಿಸಿದ ರೀತಿ ಎಲ್ಲರಿಗೂ ಉತ್ತೇಜನ ನೀಡುತ್ತದೆ. ಟಿ-20 ವಿಶ್ವಕಪ್​ನಲ್ಲಿ ಆರಂಭಿಕರಾಗಿ ರೋಹಿತ್​ ಹಾಗೂ ಯಶಸ್ವಿ ಜೈಸ್ವಾಲ್​, 3ನೇ ಸ್ಥಾನದಲ್ಲಿ ವಿರಾಟ್​ ಕೊಹ್ಲಿ ಬ್ಯಾಟಿಂಗ್​ ಮಾಡಬೇಕು. ವಿಶ್ವಕಪ್‌ನಂತಹ ಹೆಚ್ಚಿನ ಒತ್ತಡದ ಪಂದ್ಯಾವಳಿಯಲ್ಲಿ ಗುರಿಯನ್ನು ಬೆನ್ನಟ್ಟುವಾಗ ರೋಹಿತ್, ಕೊಹ್ಲಿಯ ಉಪಸ್ಥಿತಿಯು ಬಹಳ ಮುಖ್ಯವಾಗುತ್ತದೆ ಎಂದು ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಅಭಿಪ್ರಾಯಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts