ವಿರಾಟ್​ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು: ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಆಗ್ರಹ! Virat Kohli

Virat Kohli

Virat Kohli : ಭಾರತೀಯ ಕ್ರಿಕೆಟ್‌ಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಒತ್ತಾಯಿಸಿದ್ದಾರೆ.

blank

ಕೆಲವು ದಿನಗಳ ಹಿಂದೆ ವಿರಾಟ್​ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವುದು ಎಲ್ಲರಿಗೂ ಗೊತ್ತೇ ಇದೆ. ಕೊಹ್ಲಿ ಅವರಿಗೆ ಗೌರವಪೂರ್ವಕವಾಗಿ ಹಾಗೂ ಅಭಿಮಾನಿಗಳ ಸಿಹಿ ನೆನಪಿಗಾಗಿ ದೆಹಲಿಯಲ್ಲಿ ನಿವೃತ್ತಿ ಪಂದ್ಯವನ್ನು ಆಯೋಜಿಸಬೇಕು ಎಂದು ರೈನಾ ಇದೇ ಸಂದರ್ಭದಲ್ಲಿ ಬಿಸಿಸಿಐ ಅನ್ನು ಆಗ್ರಹಿಸಿದರು.

ಶನಿವಾರ (ಮೇ 17) ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದ ಆರ್​ಸಿಬಿ ಮತ್ತು ಕೆಕೆಆರ್​ ನಡುವಿನ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ಸ್ಟಾರ್ ಸ್ಪೋರ್ಟ್ಸ್ ಜತೆ ಮಾತನಾಡಿದ ರೈನಾ, ಕೊಹ್ಲಿಯ ಸಾಧನೆಗಳನ್ನು ಪ್ರಸ್ತಾಪಿಸಿದರು.

ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್‌ಗೆ ಸಲ್ಲಿಸಿದ ಸೇವೆಗಳು ಅಪಾರ. ಆಟಗಾರ ಮತ್ತು ನಾಯಕನಾಗಿ ಅನೇಕ ಯಶಸ್ಸನ್ನು ಸಾಧಿಸಿದ್ದಾರೆ. ಅವರಿಗೆ ಭಾರತ ರತ್ನ ನೀಡುವ ಸಮಯ ಬಂದಿದೆ ಎಂದು ರೈನಾ ಹೇಳಿದರು. ಇಲ್ಲಿಯವರೆಗೆ, ಸಚಿನ್ ತೆಂಡೂಲ್ಕರ್ ಅವರಿಗೆ ಮಾತ್ರ ಭಾರತ ರತ್ನ ನೀಡಲಾಗಿದೆ. 2014ರಲ್ಲಿ ಈ ಗೌರವವನ್ನು ನೀಡಲಾಯಿತು.

ಇದಲ್ಲದೆ, ದೆಹಲಿಯಲ್ಲಿ ವಿರಾಟ್ ಕೊಹ್ಲಿಗಾಗಿ ವಿಶೇಷ ನಿವೃತ್ತಿ ಪಂದ್ಯವನ್ನು ಆಯೋಜಿಸುವಂತೆ ಸುರೇಶ್​ ರೈನಾ, ಬಿಸಿಸಿಐಗೆ ವಿನಂತಿಸಿದರು. ಇನ್ನು ವಿರಾಟ್ ಕೊಹ್ಲಿಗೆ ಭಾರತ ಸರ್ಕಾರ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ. 2013 ರಲ್ಲಿ ಅರ್ಜುನ ಪ್ರಶಸ್ತಿ, 2017 ರಲ್ಲಿ ಪದ್ಮಶ್ರೀ ಮತ್ತು 2018 ರಲ್ಲಿ ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಖೇಲ್ ರತ್ನ ಪ್ರಶಸ್ತಿಯನ್ನು ನೀಡಿದೆ. ಕಳೆದ ಒಂದೂವರೆ ದಶಕದಲ್ಲಿ ಭಾರತೀಯ ಕ್ರಿಕೆಟ್‌ಗೆ ನೀಡಿದ ಸೇವೆಗಳಿಗಾಗಿ ಸರ್ಕಾರ ಕೊಹ್ಲಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಿದೆ ಎಂದು ಸುರೇಶ್ ರೈನಾ ಆಶಿಸಿದ್ದಾರೆ.

ಇದೀಗ ರೈನಾ ಮಾತಿಗೆ ಕ್ರೀಡಾಭಿಮಾನಿಗಳು ಕೂಡ ಧ್ವನಿಗೂಡಿಸಿದ್ದಾರೆ. ಕೊಹ್ಲಿ ನಿಜವಾಗಿಯೂ ಗೌರವಕ್ಕೆ ಅರ್ಹರು. ಅವರಿಗೆ ಭಾರತ ರತ್ನ ನೀಡಲೇಬೇಕು ಅಂತ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿ ಮತ್ತು ಕೆಕೆಆರ್​ ನಡುವಿನ ಪಂದ್ಯ ಭಾರಿ ಮಳೆಯಿಂದ ರದ್ದಾಯಿತು. ಈ ಪಂದ್ಯದ ವೇಳೆ ವಿರಾಟ್​ ಕೊಹ್ಲಿಗೆ ಗೌರವ ಸಲ್ಲಿಸಲು ಅಭಿಮಾನಿಗಳು 18ನೇ ನಂಬರಿನ ಬಿಳಿ ಜರ್ಸಿ ಧರಿಸಿ, ಮೈದಾನಕ್ಕೆ ಬಂದಿದ್ದರು. ಆದರೆ, ಮಳೆಯಿಂದ ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಫ್ಯಾನ್ಸ್ ತುಂಬಾ ಬೇಸರಗೊಂಡರು. ಮೇ 23ರಂದು ಬೆಂಗಳೂರಿನಲ್ಲಿ ಎಸ್​ಆರ್​ಎಚ್​ ತಂಡದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಮತ್ತೆ ಬಿಳಿ ಜರ್ಸಿ ಧರಿಸಿ, ಅಭಿಮಾನಿಗಳು ಕೊಹ್ಲಿಗೆ ಗೌರವ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕ್ಯಾಮೆರಾ ಮುಂದೆ ಮೂತ್ರ ವಿಸರ್ಜಿಸಲು ಡೈರೆಕ್ಟರ್​ ಕೇಳಿದಾಗ ಖುಷಿಯಿಂದ ಒಪ್ಪಿದ್ದೆ: ಸ್ಟಾರ್​ ನಟಿಯ ಅಚ್ಚರಿ ಹೇಳಿಕೆ! Janki Bodiwala

ಅಂದಹಾಗೆ, 14 ವರ್ಷಗಳ ವೃತ್ತಿ ಜೀವನದಲ್ಲಿ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 46.85 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕಗಳು ಮತ್ತು 31 ಅರ್ಧಶತಕಗಳನ್ನು ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ ಅಜೇಯ 254 ರನ್​. ಕೊಹ್ಲಿ, ಕೊನೆಯ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ ಭಾರತ ಪರ ಟೆಸ್ಟ್ ಪಂದ್ಯ ಆಡಿದರು. ವಿರಾಟ್ ಕೊಹ್ಲಿ ಓರ್ವ ಆಟಗಾರನಾಗಿ ಮಾತ್ರವಲ್ಲದೆ ನಾಯಕನಾಗಿಯೂ ಟೀಮ್ ಇಂಡಿಯಾಕ್ಕೆ ಅನೇಕ ಉತ್ತಮ ಗೆಲುವುಗಳನ್ನು ನೀಡಿದ್ದಾರೆ. ಅವರ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಟೆಸ್ಟ್‌ ಆಡುವ ರೀತಿ ಬದಲಾಯಿತು. ಕೊಹ್ಲಿ ಅವರು ದೀರ್ಘ ಸ್ವರೂಪದ ಕ್ರಿಕೆಟ್​ಗೆ​ ತೀವ್ರತೆಯನ್ನು ತಂದರು. ಫಿಟ್‌ನೆಸ್ ಮುಖ್ಯ ಎಂದು ಹೇಳಿಕೊಟ್ಟರು. ಹಿಂದೆಂದೂ ಕಾಣದ ರೀತಿಯಲ್ಲಿ ವೇಗದ ಬೌಲಿಂಗ್ ಅನ್ನು ಉತ್ತೇಜಿಸಿದರು. ಟೀಮ್ ಇಂಡಿಯಾ ಜಗತ್ತಿನ ಎಲ್ಲಿಯಾದರೂ ಸ್ಪರ್ಧಿಸಬಹುದು ಮತ್ತು ಗೆಲ್ಲಬಹುದು ಎಂಬ ನಂಬಿಕೆಯನ್ನು ಕೊಹ್ಲಿ ಹುಟ್ಟುಹಾಕಿದರು.

ಭಾರತಕ್ಕೆ ಟೆಸ್ಟ್‌ನಲ್ಲಿ ಅತಿ ಹೆಚ್ಚು ಗೆಲುವುಗಳನ್ನು ನೀಡಿದ ನಾಯಕರಲ್ಲಿ ವಿರಾಟ್​ ಕೊಹ್ಲಿ ಅವರು ಮೊದಲ ಸ್ಥಾನದಲ್ಲಿದ್ದಾರೆ. ಕೊಹ್ಲಿ ನೇತೃತ್ವದಲ್ಲಿ ಭಾರತ 68 ಪಂದ್ಯಗಳಲ್ಲಿ 40 ಗೆಲುವುಗಳು ಕಂಡಿದ್ದರೆ, ಎಂಎಸ್ ಧೋನಿ ನಾಯಕತ್ವದ ಅಡಿಯಲ್ಲಿ 60 ಪಂದ್ಯಗಳಲ್ಲಿ 27 ಗೆಲುವುಗಳನ್ನು ಕಂಡಿದೆ. ಸೌರವ್ ಗಂಗೂಲಿ ನಾಯಕತ್ವದಲ್ಲಿ 49 ಪಂದ್ಯಗಳಲ್ಲಿ ಭಾರತ 21 ಗೆಲುವುಗಳನ್ನು ಸಾಧಿಸಿದೆ.

ಕೊಹ್ಲಿ ಭಾವುಕ ವಿದಾಯ

ಇಂದು ನಿವೃತ್ತಿ ಘೋಷಣೆ ಮಾಡಿದ ಕೊಹ್ಲಿ, ಇನ್​ಸ್ಟಾಗ್ರಾಂನಲ್ಲಿ ಭಾವುಕರಾಗಿ ಬರೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಕರೆದೊಯ್ಯುವ ಪ್ರಯಾಣವನ್ನು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿತು, ನನ್ನನ್ನು ರೂಪಿಸಿತು ಮತ್ತು ನಾನು ಜೀವನಪರ್ಯಂತ ನನ್ನೊಂದಿಗೆ ತೆಗೆದುಕೊಂಡು ಹೋಗಬಹುದಾದ ಪಾಠಗಳನ್ನು ಕಲಿಸಿತು.

ಬಿಳಿ ಉಡುಪಿನಲ್ಲಿ ಆಡುವುದೆಂದರೆ ಅದೊಂದು ರೀತಿಯಲ್ಲಿ ಆಳವಾದ ವೈಯಕ್ತಿಕ ಬಂಧವಿದೆ. ಶಾಂತವಾದ ಜಂಜಾಟ, ದೀರ್ಘಾವಧಿ ಹಾಗೂ ಯಾರೂ ನೋಡದ ಆದರೆ ಶಾಶ್ವತವಾಗಿ ನಿಮ್ಮೊಂದಿಗೆ ಉಳಿಯುವ ಸಣ್ಣ ಕ್ಷಣಗಳು ಈ ಸ್ವರೂಪದಲ್ಲಿವೆ. ನಾನು ಈ ಸ್ವರೂಪದಿಂದ ದೂರ ಸರಿಯುವುದು ಸುಲಭವಲ್ಲ ಅನಿಸುತ್ತಿತ್ತು. ಆದರೆ, ಇದು ಸರಿಯಾದ ನಿರ್ಧಾರ ಅನಿಸುತ್ತದೆ. ನಾನು ನನ್ನಲ್ಲಿದ್ದ ಎಲ್ಲವನ್ನೂ ಈ ಸ್ವರೂಪಕ್ಕೆ ನೀಡಿದ್ದೇನೆ ಮತ್ತು ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದನ್ನು ಟೆಸ್ಟ್​ ಕ್ರಿಕೆಟ್ ನನಗೆ ಹಿಂತಿರುಗಿಸಿದೆ. ಈ ಟೆಸ್ಟ್​ ಸ್ವರೂಪಕ್ಕಾಗಿ ಹಾಗೂ ನನ್ನೊಂದಿಗೆ ಮೈದಾನ ಹಂಚಿಕೊಂಡ ಜನರಿಗೂ ಮತ್ತು ಈ ಪ್ರಯಾಣದಲ್ಲಿ ನನ್ನೊಂದಿಗೆ ಸಾಗಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಕೃತಜ್ಞತೆ ಸಲ್ಲಿಸುತ್ತಾ ತುಂಬಿದ ಹೃದಯದಿಂದ ಹೊರಡುತ್ತಿದ್ದೇನೆ. ನನ್ನ ಟೆಸ್ಟ್ ವೃತ್ತಿಜೀವನವನ್ನು ನಾನು ಯಾವಾಗಲೂ ನಗುವಿನೊಂದಿಗೆ ನೆನಪಿಸಿಕೊಳ್ಳುತ್ತೇನೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಳ್ಳುವ ಮೂಲಕ ವಿರಾಟ್​ ಕೊಹ್ಲಿ ಭಾವುಕ ವಿದಾಯ ಹೇಳಿದ್ದಾರೆ. (ಏಜೆನ್ಸೀಸ್​)

ಪ್ರಾಮಾಣಿಕತೆ ಅಂದ್ರೆ ಏನು ಅಂತಾನೇ ಗೊತ್ತಿರದ 3 ರಾಶಿ ಚಿಹ್ನೆಗಳಿವು… ಇವರ ಬಗ್ಗೆ ಜಾಗರೂಕರಾಗಿರಿ! Zodiac Signs

ನಾನು ಬಲವಂತ ಮಾಡಿಲ್ಲ… ಅಳಿಯ ರವಿ ಮೋಹನ್​ ಆರೋಪಕ್ಕೆ ಆರತಿ ತಾಯಿ ಸುಜಾತಾ ಸ್ಪಷ್ಟನೆ! Ravi Mohan

Share This Article
blank

ಹನಿ-ಹನಿ ಮೂತ್ರ ಬರುತ್ತಿದ್ರೆ ಈ ಅಂಗಕ್ಕೆ ಹಾನಿಯಾಗಿದೆ ಎಂದರ್ಥ!; ಅನಿಯಂತ್ರಿತ ಮೂತ್ರದ ಸಮಸ್ಯೆಗೆ ಕಾರಣ ಏನು? | Urinary

Urinary : ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಮೂತ್ರ ಸಂಬಂಧಿತ ಸಮಸ್ಯೆಗಳು ಭಾಧಿಸುತ್ತವೆ. ಅನೇಕ ಜನರಿಗೆ ಮೂತ್ರ…

ಕಣ್ಣಿನ ಪೊರೆ ತುಂಬಾ ಹಾನಿಕಾರಕವೇ? ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… Cataract

Cataract : ಕಣ್ಣಿನ ಪೊರೆಯು ಸಾಮಾನ್ಯವಾಗಿ ಕಂಡುಬರುವ ಕಣ್ಣಿನ ಕಾಯಿಲೆಗಳಲ್ಲಿ ಒಂದಾಗಿದೆ. ವಿಶೇಷವಾಗಿ ವಯಸ್ಸಾದಂತೆ ಇದು…

blank