More

    ಕ್ರಿಕೆಟ್​ ದಿಗ್ಗಜನ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

    ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ, ರನ್​ ಮೆಷಿನ್​ ಎಂದೇ ಖ್ಯಾತಿ ಪಡೆದಿರುವ ವಿರಾಟ್​ ಕೊಹ್ಲಿಗೆ 2023 ವಿಶೇಷ ಎಂದೇ ಹೇಳಬಹುದಾಗಿದೆ. ಈಗಾಗಲೇ ಏಕದಿನ ವಿಶ್ವಕಪ್​ ಸೇರಿದಂತೆ ಹಲವು ಪಂದ್ಯಗಳಲ್ಲಿ ದಾಖಲೆ ಬರೆದಿರುವ ಕಿಂಗ್​ ಕೊಹ್ಲಿ ಈಗ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಳ್ಳುವ ಹೊಸ್ತಿಲಲ್ಲಿ ಇದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 82 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಸನಿಹಕ್ಕೆ ತಲುಪಿದ್ದಾರೆ. ಅದು ಕೂಡ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ವಿಶೇಷ ದಾಖಲೆ ಎಂಬುದು ಮತ್ತಷ್ಟು ವಿಶೇಷವಾಗಿದೆ.

    ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಕ್ಯಾಪ್ಟನ್​ ವಿಜಯಕಾಂತ್​

    ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್​,  ಆಸ್ಟ್ರೇಲಿಯಾ (SENA) ದೇಶಗಳಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಅಧಿಕ ರನ್​ ಬಾರಿಸಿದ ದಾಖಲೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಅವರ ಹೆಸರಿನಲ್ಲಿದ್ದು, ಅವರು 74 ಬಾರಿ 50ಕ್ಕು ಅಧಿಕ ರನ್​ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಸಚಿನ್ ಅವರ ಈ ವಿಶೇಷ ದಾಖಲೆಯ ಸನಿಹಕ್ಕೆ ಬಂದಿದ್ದಾರೆ. ಅಂದರೆ ಕಿಂಗ್ ಕೊಹ್ಲಿ SENA ದೇಶಗಳಲ್ಲಿ ಒಟ್ಟು 73 ಬಾರಿ 50ಕ್ಕೂ ಅಧಿಕ ರನ್​ಗಳಿಸಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯವು ಜನವರಿ 03ರಂದು ಆರಂಭವಾಗಲಿದ್ದು, ಈ ಪಂದ್ಯದ ಎರಡು ಇನ್ನಿಂಗ್ಸ್​ನಲ್ಲಿ ವಿರಾಟ್​ ಕೊಹ್ಲಿ 50 ಕ್ಕೂ ಅಧಿಕ ರನ್​ ಗಳಿಸಿದರೆ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಅವರ ಹೆಸರಿನಲ್ಲಿರುವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts