More

    ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯಕ್ಕೆ ವಿರಾಟ್​ ಕೊಹ್ಲಿ ಅಲಭ್ಯ​; ಕಾರಣ ಹೀಗಿದೆ

    ಮೊಹಾಲಿ: ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ-20 ಸರಣಿಯು ಜನವರಿ 11ರಿಂದ ಆರಂಭವಾಗಲಿದ್ದು, ಮೊಹಾಲಿಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿ ಮೂಲಕ ಟೀಂ ಇಂಡಿಯಾದ ಅನುಭವಿ ಆಟಗಾರರಾದ ವಿರಾಟ್​ ಕೊಹ್ಲಿ ಹಾಗೂ ರೋಹಿತ್​ ಶರ್ಮಾ ಒಂದು ವರ್ಷದ ಬಳಿಕ ತಂಡಕ್ಕೆ ವಾಪಸ್​ ಆಗುತ್ತಿದ್ದಾರೆ.

    ಆದರೆ, ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್​ ಶರ್ಮಾ ಕಣಕ್ಕಿಳಿಯಲಿದ್ದು, ಕಾರಣಾಂತರಗಳಿಂದ ವಿರಾಟ್​ ಕೊಹ್ಲಿ ತಂಡದಿಂದ ಅಲಭ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವನ್ನು ಟೀಂ ಇಂಡಿಯಾದ ಮುಖ್ಯ ಕೋಚ್​​ ರಾಹುಲ್​ ದ್ರಾವಿಡ್​ ಖಚಿತಪಡಿಸಿದ್ದಾರೆ.

    ಇದನ್ನೂ ಓದಿ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಅಪ್ರಾಪ್ತ ವಯಸ್ಕಳಿಗೆ ಹೆರಿಗೆ; ಗಂಡು ಮಗುವಿಗೆ ಜನ್ಮ

    ಈ ಕುರಿತು ಮಾತನಾಡಿರುವ ಕೋಚ್​ ರಾಹುಲ್​ ದ್ರಾವಿಡ್​ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದರೆ, ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳಿಗೆ ಲಭ್ಯರಾಗಲಿದ್ದಾರೆ. ವಾಸ್ತವವಾಗಿ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ರೂಪದಲ್ಲಿ ಇಬ್ಬರು ಆರಂಭಿಕ ಆಟಗಾರರು ಇದ್ದಾರೆ. ಆದರೆ, ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಜೊತೆ ಯಶಸ್ವಿ ಓಪನಿಂಗ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

    2022ರ ನವೆಂಬರ್​ನಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಯಾವುದೇ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ಇಂಗ್ಲೆಂಡ್ ವಿರುದ್ಧ ಅಡಿಲೇಡ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಕೊಹ್ಲಿ ಅರ್ಧಶತಕ ಸಿಡಿಸಿದ್ದರು. ಆದರೆ ಟೀಂ ಇಂಡಿಯಾ ಆ ಪಂದ್ಯದಲ್ಲಿ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದಿತ್ತು. ಅಂದಿನಿಂದ ಕೊಹ್ಲಿ ಟಿ-20 ಸ್ವರೂಪದಿಂದ ದೂರ ಉಳಿದಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts