More

  ಐಸಿಸಿ ಬ್ಯಾಟರ್‌ಗಳ ರ‌್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದ ವಿರಾಟ್ ಕೊಹ್ಲಿ, ರೋಹಿತ್ ಶರ್ಮ: ಅಗ್ರಸ್ಥಾನದಲ್ಲಿ ಶುಭಮಾನ್ ಗಿಲ್

  ನವದೆಹಲಿ: ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ನಾಯಕ ರೊಹಿತ್ ಶರ್ಮ ಐಸಿಸಿ ಏಕದಿನ ಬ್ಯಾಟರ್‌ಗಳ ರ‌್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಬಡ್ತಿ ಪಡೆದಿದ್ದು, ಯುವ ಬ್ಯಾಟರ್ ಶುಭಮಾನ್ ಗಿಲ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

  ಬುಧವಾರ ಬಿಡುಗಡೆಯಾದ ಪರಿಷ್ಕೃತ ಪಟ್ಟಿಯಲ್ಲಿ ಏಕದಿನ ವಿಶ್ವಕಪ್ ಟೂರ್ನಿಯ ಸರಣಿಶ್ರೇಷ್ಠ ಕೊಹ್ಲಿ 791 ರೇಟಿಂಗ್ ಪಾಯಿಂಟ್‌ನೊಂದಿಗೆ ಮೂರನೇ ಸ್ಥಾನಕ್ಕೇರಿದರೆ, ರೋಹಿತ್ 769 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. ವಿಶ್ವಕಪ್‌ಗೆ ಮುನ್ನ ವಿರಾಟ್ ಕೊಹ್ಲಿ, ರೋಹಿತ್ ಕ್ರಮವಾಗಿ 9, 10ನೇ ಸ್ಥಾನದಲ್ಲಿದ್ದರು. ಬೌಲರ್‌ಗಳ ರ‌್ಯಾಂಕಿಂಗ್‌ನ ಅಗ್ರ-10ರಲ್ಲಿ ನಾಲ್ವರು ಭಾರತೀಯರಿದ್ದು, ಮೊಹಮದ್ ಸಿರಾಜ್, ಜಸ್‌ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ಹಾಗೂ ಮೊಹಮದ ಶಮಿ ಕ್ರಮವಾಗಿ 3,4,6 ಮತ್ತು 10ನೇ ಸ್ಥಾನದಲ್ಲಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts