

ಅಡಿಲೇಡ್: ಟಿ-20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಇದಕ್ಕಾಗಿ ತಂಡದ ಎಲ್ಲಾ ಆಟಗಾರರು ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ವಿರಾಟ್ ಕೊಹ್ಲಿ ಮೈದಾನದಲ್ಲಿ ಭರ್ಜರಿಯಾಗಿಯೇ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ.
ಟೂರ್ನಿಯಲ್ಲಿ ಮೂರು ಅರ್ಧಶತಕ ಸಹಿತ, 246ರನ್ ಸಿಡಿಸಿರುವ ಕೊಹ್ಲಿ ಯಶಸ್ವಿ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ವಿರಾಟ್ ಸೆಮಿಫೈನಲ್ ಪಂದ್ಯಕ್ಕೆ ಬ್ಯಾಟಿಂಗ್ ಸಿದ್ಧತೆ ನಡೆಸಿದ್ದಾರೆ. ಬ್ಯಾಟಿಂಗ್ ಅಭ್ಯಾಸದ ವಿಡಿಯೋವನ್ನು ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ನಲ್ಲಿ ಕೊಹ್ಲಿ ಅದ್ಭುತ ನಿರ್ವಹಣೆಯನ್ನೇ ತೋರುತ್ತಿದ್ದಾರೆ. ಇದಕ್ಕಾಗಿ ವಿರಾಟ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಮೊದಲ ಬಾರಿಗೆ ಗೆದ್ದುಕೊಂಡಿದ್ದಾರೆ. ಈ ಬಗ್ಗೆ ಕೊಹ್ಲಿ ಮಾತನಾಡಿ, ವಿಶ್ವದ ಎಲ್ಲೆಡೆ ಇರುವ ಅಭಿಮಾನಿಗಳು, ಕ್ರಿಕೆಟ್ ಪ್ರೇಮಿಗಳು ನನಗೆ ಈ ಪುರಸ್ಕಾರ ನೀಡಿರುವುದು ಇನ್ನಷ್ಟು ಹುರುಪು ತಂದಿದೆ ಎಂದಿದ್ದಾರೆ.(ಏಜೆನ್ಸೀಸ್)