More

    5000ಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಬಿಡುಗಡೆಯಾಯಿತು ‘ವಿರಾಟಪುರ ವಿರಾಗಿ’ ಚಿತ್ರದ ಟ್ರೈಲರ್

    ಗದಗ: ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿ ಬಿ.ಎಸ್.ಲಿಂಗದೇವರು ಅವರು ‘ವಿರಾಟಪುರ ವಿರಾಗಿ’ ಎಂಬ ಚಿತ್ರ ನಿರ್ದೇಶಿಸಿರುವುದು ಗೊತ್ತೇ ಇದೆ. ಈ ಚಿತ್ರ ಜನವರಿ 13ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಗದಗದಲ್ಲಿ ಟ್ರೈಲರ್ ಟ್ರೈಲರ್ ಬಿಡುಗಡೆಯಾಗಿದೆ. ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಈ ಟ್ರೈಲರ್​ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.

    ಇದಕ್ಕೂ ಮುನ್ನ, ಕಳೆದ ವರ್ಷ ಡಿಸೆಂಬರ್​ 20ರಂದು ರಾಜ್ಯದ ವಿವಿಧ ಭಾಗಗಳಿಂದ ಆರು ರಥಗಳು ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆ ನಡೆಸಿ ಸುಮಾರು ಒಂದು ಕೋಟಿ ಜನರಿಗೆ ಹಾನಗಲ್ ಶ್ರೀಗಳು ಮತ್ತು ‘ವಿರಾಟಪುರ ವಿರಾಗಿ’ ಸಿನಿಮಾ ಬಗ್ಗೆ ಜಾಗೃತಿ ಮೂಡಿಸಿದ್ದವು. ಈ ರಥಗಳನ್ನು ಜನವರಿ 1ರಂದು ಗದಗದಲ್ಲಿ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಪೂರ್ಣ ಕುಂಬದಿಂದ ಸ್ವಾಗತ ಮಾಡಿದರೆ, ಜಾನಪದ ವಾದ್ಯ, ಕಲಾಮೇಳಗಳ ಮೆರವಣಿಗೆ ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತುಂಬಿತ್ತು.

    ಇದನ್ನೂ ಓದಿ: ರಷ್ಯಾದಲ್ಲಿ ಹೊಸ ದಾಖಲೆ ಮಾಡಿದ ‘ಪುಷ್ಪ’; ಅಲ್ಲಿ ಕಲೆಕ್ಷನ್​ ಎಷ್ಟು ಗೊತ್ತಾ?

    5000ಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಬಿಡುಗಡೆಯಾಯಿತು 'ವಿರಾಟಪುರ ವಿರಾಗಿ' ಚಿತ್ರದ ಟ್ರೈಲರ್‘ವಿರಾಟಪುರ ವಿರಾಗಿ’ ಟ್ರೈಲರ್​ ಬಿಡುಗಡೆ ಮಾಡಿದ ಬಿ.ವೈ ವಿಜಯೇಂದ್ರ, ‘ಇಂಥದ್ದೊಂದು ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು’ ಎಂದರು.

    ‘ವಿರಾಟಪುರ ವಿರಾಗಿ’ ಮೇಕಿಂಗ್ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್ ಬಿಡುಗಡೆ ಮಾಡಿ, ‘ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧರಿತ ‘ವಿರಾಟಪುರ ವಿರಾಗಿ’ ಸಿನಿಮಾ ವೀಕ್ಷಿಸಿ, ಯುವಕರು ವರ್ತನೆಗಳನ್ನು ತಿದ್ದುಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ವಾರ ಚಿತ್ರಮಂದಿರದಲ್ಲಿ ಉಚಿತವಾಗಿ ಸಿನಿಮಾ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು’ ಎಂದರು.

    ಇದನ್ನೂ ಓದಿ: ಸಿದ್ಧೇಶ್ವರ ಶ್ರೀಗಳ ನಿಧನಕ್ಕೆ ಸ್ಯಾಂಡಲ್​ವುಡ್​ ಸಂತಾಪ

    5000ಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಬಿಡುಗಡೆಯಾಯಿತು 'ವಿರಾಟಪುರ ವಿರಾಗಿ' ಚಿತ್ರದ ಟ್ರೈಲರ್ಬಿ.ಎಸ್.ಲಿಂಗದೇವರು ಮಾತನಾಡುತ್ತಾ, ‘ಆಧುನಿಕ ಜಗತ್ತಿನಲ್ಲಿ ಧಾರ್ಮಿಕ, ಭಕ್ತಿಪ್ರಧಾನ ಸಿನಿಮಾಗಳನ್ನು ಜನರಿಗೆ ಮುಟ್ಟಿಸುವುದೇ ಸವಾಲಿನ ಕೆಲಸವಾಗಿದೆ. ಹಾಗಾಗಿ ಈ ಸಿನಿಮಾವನ್ನು ಜನರಿಗೆ ತಲುಪಿಸುವ ಕೆಲಸ ಎಲ್ಲರಿಂದಲೂ ನಡೆಯಬೇಕು. ಈ ಸಿನಿಮಾವಾಗಲು ಅನೇಕ ಗುರುಗಳ, ಪಂಡಿತರು ಮಾರ್ಗದರ್ಶನ ಮಾಡಿದ್ದಾರೆ. ಜನವರಿ 13ರಂದು ಸಿನಿಮಾ ತೆರೆಗೆ ಬರಲಿದೆ’ ಎಂದರು.

    ಈ ಸಂದರ್ಭದಲ್ಲಿ ಅಲ್ಲಂ ವೀರಭದ್ರಪ್ಪ, ತೋಂಟದಾರ್ಯ ಮಠದ ಡಾ.ಸಿದ್ದರಾಮ ಸ್ವಾಮೀಜಿ, ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ದೇಶ್ವರ ರಾಜಯೋಗೀಂದ್ರ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಸುಚೇಂದ್ರ ಪ್ರಸಾದ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.

    ‘ಪಠಾಣ್​’ ಹೆಸರು ಬದಲಾಗುತ್ತಾ? ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts