ಕಾರಿನಲ್ಲಿ ಸೆಹ್ವಾಗ್ ಮತ್ತು ಪತ್ನಿ ನಡುವೆ ಜಗಳ: ಈ ವಿಡಿಯೋ ನೋಡಿ…Virender Sehwag

Virender Sehwag  : ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್   ಅವರು ಕಾರಿನಲ್ಲಿ ಪ್ರಯಾಣ ಮಾಡುತ್ತಿರುವಾಗ ಪತ್ನಿ ಆರತಿ ಅಹ್ಲಾವತ್ ನಡುವೆ  ಗಲಾಟೆ ನಡೆದಿದೆ. ಈ ಕುರಿತಾದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.  ಆದರೆ ಈ ವಿಡಿಯೋ  ಹಿಂದಿನ ಅಸಲಿ ಕಥೆಯೇ ಬೇರೆ ಇದೆ….

ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸೆಹ್ವಾಗ್ ಮತ್ತು ಅವರ ಪತ್ನಿ ಆರತಿ ಅಹ್ಲಾವತ್ ನಡುವೆ ಎಲ್ಲವೂ ಸರಿಯಿಲ್ಲ ಎಂದು ವರದಿಗಳು ಕೇಳಿ ಬರುತ್ತಿದೆ. ಅಲ್ಲದೆ ಇಬ್ಬರೂ ಕೆಲ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವೀರೇಂದ್ರ ಸೆಹ್ವಾಗ್ ಮತ್ತು ಪತ್ನಿ ಆರತಿ ಕಾರಿನಲ್ಲಿ ಪರಸ್ಪರ ಜಗಳವಾಡುತ್ತಿರುವುದನ್ನು ಕಾಣಬಹುದು. ಇದೀಗ ಇದೇ ವಿಡಿಯೋ ಇಟ್ಟುಕೊಂಡು ಸೆಹ್ವಾಗ್-ಆರತಿ ನಡುವೆ   ಸರಿಯಿಲ್ಲ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋ AI ಜನರೇಟೆಡ್. ಅಂದರೆ ಕೃತಕ ಬುದ್ಧಿಮತ್ತೆಯ ಮೂಲಕ ರಚಿಸಲಾಗಿದೆ. ಸೆಹ್ವಾಗ್ ಹಾಗೂ ಆರತಿ ಈ ಹಿಂದೆ ಕಾರಿನಲ್ಲಿ ಪ್ರಯಾಣಿಸಿದ ಫೋಟೋವನ್ನು ಬಳಸಿಕೊಂಡು ಇಲ್ಲಿ ಜಗಳವಾಡುತ್ತಿರುವ ವಿಡಿಯೋವನ್ನು ರಚಿಸಲಾಗಿದೆ. ಇಂತಹದೊಂದು ನಕಲಿ ವಿಡಿಯೋ ರಚಿಸಿ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳೊಂದಿಗೆ ಹರಿಬಿಟ್ಟಿದ್ದಾರೆ.

 ವೀರೇಂದ್ರ ಸೆಹ್ವಾಗ್ 2004 ರಲ್ಲಿ ಆರತಿ ಅವರನ್ನು ವಿವಾಹವಾಗಿದ್ದರು. ಆದರೆ ಈಗ ಸುಮಾರು 21 ವರ್ಷಗಳ ನಂತರ ಅವರ ಸಂಬಂಧವು ಮುರಿದು ಬೀಳುವ ಹಂತಕ್ಕೆ ಬಂದು ನಿಂತಿದೆ ಎಂದು ವರದಿಯಾಗಿದೆ. ಇದನ್ನು ಪುಷ್ಠೀಕರಿಸುವಂತೆ ಇಬ್ಬರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸೆಹ್ವಾಗ್ ಅವರ ಇತ್ತೀಚಿನ ಪೋಸ್ಟ್‌ಗಳು ಮತ್ತು ಅಪ್‌ಡೇಟ್‌ಗಳಲ್ಲಿ ಸಹ ಅವರ ಪತ್ನಿಯೊಂದಿಗೆ ಯಾವುದೇ ಚಿತ್ರವಿಲ್ಲ.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…