More

    ವೀರೇಂದ್ರ ಹೆಗ್ಗಡೆ ಜನಮುಖಿ ಕಾರ್ಯ ರಾಷ್ಟ್ರಕ್ಕೆ ಮಾದರಿ

    ಕೆ.ಆರ್.ನಗರ : ದೇಶದ ಅಭಿವೃದ್ಧಿಯ ವಿಚಾರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಅವರಿಗೆ ಎಲ್ಲರೂ ಪ್ರೋತ್ಸಾಹ ಮತ್ತು ಸಹಕಾರ ನೀಡಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

    ಪಟ್ಟಣದ ಎಚ್.ಡಿ.ದೇವೇಗೌಡ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಪುರುಷನ ಸಾಧನೆಯ ಹಿಂದೆ ಮಹಿಳೆಯರ ಪಾತ್ರ ಇದೆ. ಇಬ್ಬರು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಯಶಸ್ಸು ನಿಶ್ಚಿತ ಎಂದರು.

    ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡರೆ ದೇಶ ಅಭಿವೃದ್ಧಿ ಸಾಧ್ಯ, ಈ ವಿಚಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಪೋಷಕ ಪಾತ್ರವನ್ನು ವಹಿಸುತ್ತಿದ್ದು, ಇಂತಹ ಸಮಾಜಮುಖಿ ಕೆಲಸ ಮಾಡುತ್ತಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಜನಮುಖಿ ಕಾರ್ಯ ರಾಷ್ಟ್ರಕ್ಕೆ ಮಾದರಿ ಎಂದು ಪ್ರಶಂಸಿಸಿದರು.

    ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ದುರ್ಬಲರಾಗಿರುವ ಮಹಿಳೆಯರಿಗೆ ಸಾಲದ ಸವಲತ್ತು ಕಲ್ಪಿಸಿ ಆ ಮೂಲಕ ಅವರು ಉತ್ತಮ ಬದುಕು ಕಟ್ಟಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಲು ಕೆಲಸ ಮಾಡುತ್ತಿರುವ ಧರ್ಮಸ್ಥಳ ಯೋಜನೆಯ ಕಾರ್ಯವೈಖರಿ ಇತರರಿಗೆ ಮಾದರಿಯಾಗಿದ್ದು, ಅವರಿಗೆ ನಾವು ಸದಾ ಬೆನ್ನೆಲುಬಾಗಿ ನಿಲ್ಲಬೇಕೆಂದರು.

    ಈ ಹಿಂದೆ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಸರ್ಕಾರದ ನಾಯಕತ್ವ ವಹಿಸಿ ಮುಖ್ಯಮಂತ್ರಿಗಳಾಗಿದ್ದಾಗ ಅಂದಿನ ನಮ್ಮ ಸರ್ಕಾರ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳನ್ನು ದೇಶದಲ್ಲಿಯೇ ಮೊದಲ ಬಾರಿಗೆ ರಚನೆ ಮಾಡಿ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿತ್ತೆಂದು ನುಡಿದರು.

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ, ಜಿಲ್ಲಾ ನಿರ್ದೇಶಕ ಮುರುಳೀಧರ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಕೆ.ಎಂ.ನಾಗರತ್ನಮ್ಮ, ಸಂಪತ್‌ಕುಮಾರ್ ಮಾತನಾಡಿದರು. ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್, ತಾಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಎಚ್.ಪಿ.ಪರಶುರಾಮ್, ಪ್ರಧಾನ ಕಾರ್ಯದರ್ಶಿ ಬಿ.ಅಣ್ಣಾಜಿಗೌಡ, ಪ್ರಸೂತಿ ತಜ್ಷೆ ಡಾ.ಎಸ್.ವೈ.ಭವಾನಿ, ಮಹಾರಾಣಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಚಂದ್ರಕಲಾ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts