

ಸಿಂಧನೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯಿಂದ ನಡೆದ 2023ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾ.17ರಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ವಿರುಪಾಪುರ ಸರ್ಕಾರ ಪ್ರೌಢಶಾಲೆಯ ಸ್ಕೌಟ್ಸ್ ವಿದ್ಯಾರ್ಥಿ ವೀರೇಶ ಹಾಗೂ ಗೈಡ್ಸ್ ವಿದ್ಯಾರ್ಥಿನಿ ಸೌಮ್ಯಾ ನಾಗಪ್ಪ ಅವರು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಎಸ್ಡಿಎಂಸಿ ಅಧ್ಯಕ್ಷ ಈರಪ್ಪ ಅಯ್ಯಳಿ, ಮುಖ್ಯಶಿಕ್ಷಕಿ ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.